ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಂತ ಹಂತವಾಗಿ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ಅದರಲ್ಲಿ ಮಹಿಳೆಯರಿಗೆ ಪ್ರಮುಖವಾಗಿ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ಮಾಡಿತು. ಈಗ ಡಿಸಿಎಂ ಡಿಕೆ ಶಿವಕುಮಾರ್ ಗೃಹಲಕ್ಷ್ಮಿ ಯೋಜನೆ ಪ್ರತಿ ತಿಂಗಳು ಹಾಕುತ್ತೇವೆ ಅಂತ ಹೇಳಿಲ್ಲ ಎಂದು ಹೇಳಿಕೆ ನೀಡಿದ್ದರು.
ಇದೀಗ ತಮ್ಮ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಸ್ಪಷ್ಟನೆ ನೀಡಿದ್ದು, ನೀವು ಟ್ಯಾಕ್ಸ್ ಸರಿಯಾದ ಸಮಯಕ್ಕೆ ನೀಡಿದರೆ ನಾವು ಗೃಹಲಕ್ಷ್ಮಿ ಹಣ ಹಾಕ್ತೇವೆ ಸರಿಯಾಗಿ ನೀಡಿದರೆ ನಾವು ಗೃಹಲಕ್ಷ್ಮಿ ಹಣ ಸರಿಯಾಗಿ ಹಾಕ್ತೇವೆ ಎಂದು ಸಮರ್ಥಿಸಿಕೊಂಡಿದ್ದಾರೆ. ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಪ್ರತಿ ತಿಂಗಳು ಹಣ ಹಾಕಲ್ಲ ಎಂಬ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದರು.
ನಾವು ಘೋಷಣೆ ಮಾಡಿದಂತೆ 2,000 ಹಣ ನೀಡುತ್ತಿದ್ದೇವೆ. ಆದರೆ ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆ ಹಣ ಹಾಕುತ್ತೇವೆ ಎಂದು ಹೇಳಿಲ್ಲ. ನೀವು ಟ್ಯಾಕ್ಸ್ ಸರಿಯಾದ ಸಮಯಕ್ಕೆ ನೀಡಿ ಅದರಂತೆ ನಾವು ಹಾಕುತ್ತೇವೆ. ಕೇಂದ್ರ ಸರ್ಕಾರವು ಘೋಷಣೆ ಮಾಡಿದಂತೆ ಪ್ರತಿ ತಿಂಗಳು ಹಣ ಹಾಕುತ್ತಿದೆಯಾ? ಸ್ವಲ್ಪ ದಿನ ತಡವಾಗುತ್ತದೆ ಹದಿನೈದು ದಿನ ಹೆಚ್ಚು ಕಡಿಮೆ ಆಗುತ್ತದೆ. ಆದರೆ ಪ್ರತಿ ತಿಂಗಳು ಹಣ ನೀಡುತ್ತಿದ್ದೇವೆ ಅಲ್ಲವೇ? ಎಂದು ಡಿಕೆ ಶಿವಕುಮಾರ್ ಅವರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.