ದಾವಣಗೆರೆ : ವಕ್ಫ್ ಬೋರ್ಡ್ ವತಿಯಿಂದ ರೈತರಿಗೆ ನೋಟಿಸ್ ನೀಡಿದ ವಿಚಾರವಾಗಿ, ಇಂದು ರಾಜ್ಯಾದ್ಯಂತ ಬಿಜೆಪಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ಮಾಡುತ್ತಿದೆ. ಇದೆ ವಿಚಾರವಾಗಿ ದಾವಣಗೆರೆಯಲ್ಲಿ ಬಿಜೆಪಿಯ ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ಅವರು, ಜಮೀರ್ ಹುಚ್ಚಾಟ ನಡೆಸಿದರೆ ಪಾಕಿಸ್ತಾನಕ್ಕೆ ಓಡಿಸುತ್ತೇವೆ ಹುಷಾರ್ ಎಂದು ಎಚ್ಚರಿಕೆ ನೀಡಿದ್ದಾರೆ.
ದಾವಣಗೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭ್ರಷ್ಟ ತುಘಲಕ್ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿದೆ. ಅಲ್ಪಸಂಖ್ಯಾತರ ವಿರುದ್ಧ ಹೋರಾಟ ಅಲ್ಲ. ಇದು ಹಕ್ಕುಗಳಿಗಾಗಿ ಹೋರಾಟ.ರೈತರು ಮಠದ ಜಮೀನುಗಳನ್ನು ಕಬಳಿಸಿದವರ ವಿರುದ್ಧ ಹೋರಾಟ ಎಂದು ಅವರು ತಿಳಿಸಿದರು.
ಜಮೀರ್ ಅಹ್ಮದ್ ಖಾನ್ ಒಬ್ಬ ಮತಾಂಧ. ವಸತಿ ಖಾತೆ ಸಚಿವ ಎನ್ನುವುದನ್ನು ಮರೆತು ಆಸ್ತಿ ಕಬಳಿಕೆ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ಕುರ್ಚಿ ಕಂಟಕ ಇದೆ. ಉಪಚುನಾವಣೆಯ ಬಳಿಕ ನಿಮ್ಮವರೇ ಕುರ್ಚಿಯಿಂದ ಕೆಳಗೆ ಇಳಿಸುತ್ತಾರೆ. ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿಮೀರಿ ಹೋಗಿದೆ. ಉಪಚುನಾವಣೆಯ ಗೋಸ್ಕರ ರೈತರ ಕಣ್ಣೊರೆಸುವ ಕೆಲಸ ಮಾಡುತ್ತಿದ್ದಾರೆ.
ಜಮೀರ್ ಅಹ್ಮದ್ ಹುಚ್ಚಾಟ ನಡೆಸಿದರೆ ಪಾಕಿಸ್ತಾನಕ್ಕೆ ಓಡಿಸುತ್ತೇವೆ ಹುಷಾರ್. ವಕ್ಫ್ ಬೋರ್ಡ್ ತಿದ್ದುಪಡಿ ಮಾಡಲು ಮೋದಿಗೆ ಬೆಂಬಲ ನೀಡಬೇಕು. ನಾನು ಕೂಡ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರವನ್ನು ಬರೆದಿದ್ದೇನೆ.ರೈತರಿಗೆ ಪರಿಹಾರ, ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುವುದಿಲ್ಲ. ವಕ್ಫ್ ಆಸ್ತಿ ರಕ್ಷಣೆ ಮಾಡಲು 35 ಸಾವಿರ ಕೋಟಿ ಹಣ ಮಾಡುತ್ತೀರಿ 5 ಗ್ಯಾರಂಟಿಯಂತೆ ಆರನೇ ಗ್ಯಾರಂಟಿ ವಕ್ಫ್ ಬೋರ್ಡ್ ಆಸ್ತಿ ಉಳಿಸುವುದು ಎಂದು ವಾಗ್ದಾಳಿ ನಡೆಸಿದರು.