Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ.ಶಿವಕುಮಾರ್‌

09/02/2026 8:27 PM

ಆರ್ಮಿ ಗ್ರೂಪ್-ಸಿ ಹುದ್ದೆ ಪರೀಕ್ಷೆ ವೇಳೆ ಕಳ್ಳಾಟ: 18 ಪರೀಕ್ಷಾರ್ಥಿಗಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ

09/02/2026 8:23 PM

ಲಾರಿ-ಬೈಕ್ ನಡುವೆ ಭೀಕರ ಅಪಘಾತ: ತಾಯಿ-ಮಗಳು ಸ್ಥಳದಲ್ಲೇ ಸಾವು

09/02/2026 8:15 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ದ್ವಿತೀಯ PU ಪರೀಕ್ಷಾ ಅವಧಿ 15 ನಿಮಿಷ ಕಡಿತ : ಇನ್ಮುಂದೆ 2:45 ಗಂಟೆ ಪರೀಕ್ಷೆ!
KARNATAKA

BIG NEWS : ದ್ವಿತೀಯ PU ಪರೀಕ್ಷಾ ಅವಧಿ 15 ನಿಮಿಷ ಕಡಿತ : ಇನ್ಮುಂದೆ 2:45 ಗಂಟೆ ಪರೀಕ್ಷೆ!

By kannadanewsnow5713/09/2024 5:34 AM

ಬೆಂಗಳೂರು : ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬಿಗ್ ಶಾಕ್ ನೀಡಿದ್ದು, ಪರೀಕ್ಷಾ ಅವಧಿಯನ್ನು 15 ನಿಮಿಷ ಕಡಿತಗೊಳಿಸಿದ್ದು, ಹೊಸ ನಿಯಮದಂತೆ ಇನ್ನು ಮುಂದೆ ಪರೀಕ್ಷಾ ಅವಧಿ 2 ಗಂಟೆ 45 ನಿಮಿಷ ಇರಲಿದೆ.

ದ್ವಿತೀಯ ಪಿಯು ಪರೀಕ್ಷಾ ಅವಧಿಯನ್ನು 15 ನಿಮಿಷ ಕಡಿತಗೊಳಿಸಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದ್ದು, ಹೊಸ ನಿಯಮದಂತೆ ಪರೀಕ್ಷಾ ಅವಧಿ 2 ಗಂಟೆ 45 ನಿಮಿಷ ಇರಲಿದೆ. ಇದುವರೆಗಿನ ಪರೀಕ್ಷೆಗಳಲ್ಲಿ 3 ಗಂಟೆ ಅವಧಿ ಇರುತ್ತಿತ್ತು. ಪರೀಕ್ಷೆಗೆ ಉತ್ತರ ಬರೆಯುವ ಅವಧಿಯನ್ನು 2 ಗಂಟೆ 45 ನಿಮಿಷ ನಿಗದಿ ಮಾಡಿದ್ದರೂ, ವಿದ್ಯಾರ್ಥಿಗಳಿಗೆ ಪ್ರಶ್ನೆಗಳನ್ನು ಓದಿಕೊಳ್ಳಲು ಹೆಚ್ಚುವರಿಯಾಗಿ 15 ನಿಮಿಷ ನೀಡಲಾಗುತ್ತದೆ. ಈ ಹಿಂದೆ 3 ಗಂಟೆ ಇದ್ದಾಗಲೂ ಪ್ರಶ್ನೆಗಳ ಓದಿಗೆ ಹೆಚ್ಚುವರಿಯಾಗಿ 15 ನಿಮಿಷ ನೀಡಲಾಗುತ್ತಿತ್ತು.

ಹಿಂದಿನ ಪರೀಕ್ಷೆಗಳಲ್ಲಿ ಪ್ರತಿ ವಿಷಯದ ಲಿಖಿತ ಪರೀಕ್ಷೆಯನ್ನು 100 ಅಂಕಗಳಿಗೆ ನಡೆಸಲಾಗುತ್ತಿತ್ತು. 2023-24 ಸಾಲಿನಿಂದ ಪ್ರಾಯೋಗಿಕ ಪರೀಕ್ಷೆ ಹಾಗೂ ಆಂತರಿಕ ಮೌಲ್ಯಮಾಪನಕ್ಕೆ ಪ್ರತ್ಯೇಕ ಅಂಕಗಳನ್ನು ನಿಗದಿ ಮಾಡಿದ್ದ ಕಾರಣ ಲಿಖಿತ ಪರೀಕ್ಷೆಯ ಅಂಕಗಳನ್ನು ಕಡಿತ ಮಾಡಲಾಗಿತ್ತು. ಆದರೆ, ಪರೀಕ್ಷಾ ಅವಧಿಯನ್ನು ಕಡಿತ ಮಾಡಿರಲಿಲ್ಲ. ಭೌತ ಶಾಸ್ತ್ರ, ರಸಾಯನ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ, ಗೃಹ ವಿಜ್ಞಾನ ಸೇರಿದಂತೆ ಪ್ರಾಯೋಗಿಕ ಪರೀಕ್ಷೆ ಇರುವ ಕೆಲ ವಿಷಯಗಳಲ್ಲಿ ಲಿಖಿತ ಪರೀಕ್ಷೆಯನ್ನು 70 ಅಂಕಗಳಿಗೆ ಹಾಗೂ ಪ್ರಾಯೋಗಿಕ ಪರೀಕ್ಷೆ ಇಲ್ಲದ ವಿಷಯಗಳಲ್ಲಿ 80 ಅಂಕಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ.

ವಿದ್ಯಾರ್ಥಿಗಳು 80 ಅಂಕಗಳಿಗೆ ಉತ್ತರಿಸಬೇಕಾದ ವಿಷಯಗಳ ಪ್ರಶ್ನೆ ಪತ್ರಿಕೆಗಳು ಒಟ್ಟು 120 ಅಂಕಗಳ ಪ್ರಶ್ನೆಗಳು ಒಳಗೊಂಡಿದ್ದು, ಅವುಗಳಲ್ಲಿ 80 ಅಂಕಗಳಿಗಷ್ಟೇ ಉತ್ತರ ನೀಡಬೇಕು. 70 ಅಂಕಗಳಿಗೆ ಉತ್ತರಿಸುವ ವಿಷಯಗಳ ಪ್ರಶ್ನೆ ಪತ್ರಿಕೆ 105 ಅಂಕಗಳ ಪ್ರಶ್ನೆಗಳು ಒಳಗೊಂಡಿದ್ದು, 70 ಅಂಕಗಳಿಗೆ ಮಾತ್ರ ಉತ್ತರಿಸಬೇಕು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದೆ.

BIG NEWS : ದ್ವಿತೀಯ PU ಪರೀಕ್ಷಾ ಅವಧಿ 15 ನಿಮಿಷ ಕಡಿತ : ಇನ್ಮುಂದೆ 2:45 ಗಂಟೆ ಪರೀಕ್ಷೆ! BIG NEWS: II PU exam duration cut by 15 minutes: Now 2:45 pm exam
Share. Facebook Twitter LinkedIn WhatsApp Email

Related Posts

ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ.ಶಿವಕುಮಾರ್‌

09/02/2026 8:27 PM4 Mins Read

ಆರ್ಮಿ ಗ್ರೂಪ್-ಸಿ ಹುದ್ದೆ ಪರೀಕ್ಷೆ ವೇಳೆ ಕಳ್ಳಾಟ: 18 ಪರೀಕ್ಷಾರ್ಥಿಗಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ

09/02/2026 8:23 PM1 Min Read

ಲಾರಿ-ಬೈಕ್ ನಡುವೆ ಭೀಕರ ಅಪಘಾತ: ತಾಯಿ-ಮಗಳು ಸ್ಥಳದಲ್ಲೇ ಸಾವು

09/02/2026 8:15 PM1 Min Read
Recent News

ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ.ಶಿವಕುಮಾರ್‌

09/02/2026 8:27 PM

ಆರ್ಮಿ ಗ್ರೂಪ್-ಸಿ ಹುದ್ದೆ ಪರೀಕ್ಷೆ ವೇಳೆ ಕಳ್ಳಾಟ: 18 ಪರೀಕ್ಷಾರ್ಥಿಗಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ

09/02/2026 8:23 PM

ಲಾರಿ-ಬೈಕ್ ನಡುವೆ ಭೀಕರ ಅಪಘಾತ: ತಾಯಿ-ಮಗಳು ಸ್ಥಳದಲ್ಲೇ ಸಾವು

09/02/2026 8:15 PM

BREAKING: ವಿಧಾನಸೌಧದ ಮುಂದೆಯೇ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಬ್ಯಾನರ್ ಅಳವಡಿಕೆ: FIR ದಾಖಲು

09/02/2026 8:10 PM
State News
KARNATAKA

ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ.ಶಿವಕುಮಾರ್‌

By kannadanewsnow0909/02/2026 8:27 PM KARNATAKA 4 Mins Read

ಬೆಂಗಳೂರು : “ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿಯುವ ನಿರ್ಧಾರವನ್ನು ತೆಗೆದುಕೊಂಡಿದೆ. ಕೇಂದ್ರ ಸರ್ಕಾರ ಕಳುಹಿಸಿರುವ…

ಆರ್ಮಿ ಗ್ರೂಪ್-ಸಿ ಹುದ್ದೆ ಪರೀಕ್ಷೆ ವೇಳೆ ಕಳ್ಳಾಟ: 18 ಪರೀಕ್ಷಾರ್ಥಿಗಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ

09/02/2026 8:23 PM

ಲಾರಿ-ಬೈಕ್ ನಡುವೆ ಭೀಕರ ಅಪಘಾತ: ತಾಯಿ-ಮಗಳು ಸ್ಥಳದಲ್ಲೇ ಸಾವು

09/02/2026 8:15 PM

BREAKING: ವಿಧಾನಸೌಧದ ಮುಂದೆಯೇ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಬ್ಯಾನರ್ ಅಳವಡಿಕೆ: FIR ದಾಖಲು

09/02/2026 8:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.