ಬೆಂಗಳೂರು : ಮಾರ್ಚ್ 2025 ರ ದ್ವಿತೀಯ ಪಿಯುಸಿ ಪರೀಕ್ಷೆ-1 ಕ್ಕೆ ಪುನರಾವರ್ತಿತ, ಫಲಿತಾಂಶ ಉತ್ತಮಪಡಿಸಿಕೊಳ್ಳುವ ಹಾಗೂ ಖಾಸಗಿ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕ ಸಂದಾಯ ಮಾಡಲು ಕೊನೆಯ ದಿನಾಂಕವನ್ನು ಡಿಸೆಂಬರ್ 31 ರವರೆಗೆ ವಿಸ್ತರಿಸಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಆದೇಶ ಹೊರಡಿಸಿದೆ.
ಮೇಲ್ಕಂಡ ವಿಷಯ ಮತ್ತು ಉಲ್ಲೇಖಗಳನ್ವಯ 2025 ರ ದ್ವಿತೀಯ ಪಿಯುಸಿ ಪರೀಕ್ಷೆ-1 ಕ್ಕೆ ಪುನರಾವರ್ತಿತ, ಫಲಿತಾಂಶ ಉತ್ತಮಪಡಿಸಿಕೊಳ್ಳುವ ಹಾಗೂ ಖಾಸಗಿ ವಿದ್ಯಾರ್ಥಿಗಳುದಂಡ ಶುಲ್ಕ 1200 ರೂ. ಪಾವತಿಸಿ ನೋಂದಣಿ ಮಾಡಿಕೊಳ್ಳಲು ಡಿ.12ರವರೆಗೆ ವಿಸ್ತರಿಸಲಾಗಿತ್ತು. ಈಗ ದಂಡ ಶುಲ್ಕ 1200 ರೂ. ಹಾಗೂ ವಿಶೇಷ ದಂಡ ಶುಲ್ಕ 1,320 ರೂ.ಗಳನ್ನು ಪಾವತಿಸಿ ನೋಂದಣಿ ಮಾಡಿಕೊಳ್ಳಲು ಡಿ.31 ಕೊನೆಯ ದಿನವಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ತಿಳಿಸಿದೆ.
ಪೋಷಕರು ಹಾಗೂ ವಿದ್ಯಾರ್ಥಿಗಳ ದೂರವಾಣಿ ಕರೆಗಳು ಹಾಗೂ ಮನವಿ ಮೇರೆಗೆ ಸದರಿ ಪರೀಕ್ಷೆಗೆ ಶುಲ್ಕ ಪಾವತಿಸುವ ದಿನಾಂಕವನ್ನು ಈ ಕೆಳಕಂಡಂತೆ ವಿಸ್ತರಿಸಿ ಆದೇಶಿಸಲಾಗಿದೆ. ಈಗಾಗಲೇ ಹಲವು ಬಾರಿ ವಿಸ್ತರಿಸಿರುವುದರಿಂದ ಪರೀಕ್ಷಾ ಶುಲ್ಕ ಪಾವತಿಸುವ ದಿನಾಂಕವನ್ನು ಯಾವುದೇ ಕಾರಣಕ್ಕೂ ಪುನ: ವಿಸ್ತರಿಸಲಾಗುವುದಿಲ್ಲ. ಇದು ಅಂತಿಮ ಅವಕಾಶವಾಗಿದ್ದು, ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯುವಂತೆ ಪ್ರಾಂಶುಪಾಲರು ಕ್ರಮ ವಹಿಸಲು ಸೂಚಿಸಿದೆ.