ಬೆಂಗಳೂರು : ರಾಜ್ಯ ಸರ್ಕಾರವು ಅನರ್ಹ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್ ನೀಡಲು ಮುಂದಾಗಿದ್ದು, ಅನರ್ಹ ಬಿಪಿಎಲ್ ಕಾರ್ಡ್ ಸಿಕ್ಕಿಬಿದ್ದರೆ ದಂಡದ ಜೊತೆಗೆ ಕಾನೂನು ಕ್ರಮ ಎದುರಿಸಬೇಕು.
ಹೌದು, ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವ ಅನರ್ಹ ಫಲಾನುಭವಿಗಳನ್ನು ಗುರುತಿಸುವ ಕೆಲಸಕ್ಕೆ ಆಹಾರ ಇಲಾಖೆ ಮುಂದಾಗಿದೆ. ಈ ಮೂಲಕ ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರಿಗೆ ಡವ ಡವ ಶುರುವಾಗಿದೆ. ಸುಳ್ಳು ದಾಖಲೆ ನೀಡಿ ಬಿಪಿಎಲ್ ಕಾರ್ಡ್ ಪಡೆದಿದ್ದರೆ ಇದುವರೆಗೂ ನ್ಯಾಯ ಬೆಲೆ ಅಂಗಡಿಗಳಲ್ಲಿ ಪಡೆದ ಅಕ್ಕಿ ಹಾಗೂ ಇತರೆ ಧಾನ್ಯಗಳ ಮೊತ್ತವನ್ನು ಮರಳಿಸಬೇಕು ಜೊತೆಗೆ ಕ್ರಿಮಿನಲ್ ಕೇಸ್ ಎದುರಸಬೇಕು ಎನ್ನಲಾಗಿದೆ.
ಗ್ರಾಮೀಣ ಪ್ರದೇಶದಲ್ಲಿ ಶೇಕಡ 76.04, ನಗರ ಪ್ರದೇಶದಲ್ಲಿ ಶೇಕಡ 49.36 ಸೇರಿ 3,58,87,666 ಫಲಾನುಭವಿಗಳಿಗೆ 1,03,70,666 ಬಿಪಿಎಲ್ ಕಾರ್ಡ್ ನೀಡಬೇಕೆಂಬ ನಿಯಮವಿದೆ. ಆದರೆ, ರಾಜ್ಯದಲ್ಲಿ 3,93,29,981 ಫಲಾನುಭವಿಗಳಿಗೆ 1,16,51,209 ಬಿಪಿಎಲ್ ಕಾರ್ಡ್ ನೀಡಲಾಗಿದೆ. ನಿಗದಿಗಿಂತ 14 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ಹೆಚ್ಚುವರಿಯಾಗಿ ನೀಡಲಾಗಿದೆ ಎಂದು ಆಹಾರ ಇಲಾಖೆ ಮಾಹಿತಿ ನೀಡಿದೆ.
ತೆರಿಗೆ ಪಾವತಿಸುವವರು, ಸರ್ಕಾರಿ ಮತ್ತು ಅರೆ ಸರ್ಕಾರಿ ನೌಕರರು, ಮನೆಗಳನ್ನು ಬಾಡಿಗೆ ಕೊಟ್ಟಿರುವವರು, 7.5 ಎಕರೆಗಿಂತ ಹೆಚ್ಚು ಭೂಮಿ ಹೊಂದಿರುವವರು ಬಿಪಿಎಲ್ ಕಾರ್ಡ್ ಪಡೆಯುವಂತಿಲ್ಲ.