ಬೆಂಗಳೂರು : ಅಕ್ರಮವಾಗಿ ದುಬೈನಿಂದ ಚಿನ್ನ ಸಾಗಾಟ ಪ್ರಕರಣದಲ್ಲಿ ಸದ್ಯ ನಟಿ ರನ್ಯಾ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಇದೇ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ, ಬೆಂಗಳೂರಿನ ಹೋಟೆಲ್ ಉದ್ಯಮಿ ತಮ್ಮನ ಮಗ ತರುಣ್ ರಾಜು ನನ್ನು ನಿನ್ನೆ ಡಿ ಆರ್ ಐ ಅಧಿಕಾರಿಗಳು ಅರೆಸ್ಟ್ ಮಾಡಿದ್ದರು. ಇದೀಗ ವಿಚಾರಣೆ ವೇಳೆ ಮತ್ತೊಂದು ಸ್ಫೋಟಕವಾದ ಮಾಹಿತಿ ಬಹಿರಂಗವಾಗಿದೆ.
ಹೌದು ನಟಿ ರನ್ಯಾರಾವ್ ಅಕ್ರಮ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ, ವಿಚಾರಣೆ ನಡೆಸಿದ ಅಧಿಕಾರಿಗಳು ನಟಿ ರನ್ಯಾರಾವ್ ಮತ್ತು ಬಂಧಿತ ಮತ್ತೋರ್ವ ಆರೋಪಿ ತರುಣ ರಾಜು ಮಾಜಿ ಪ್ರೇಮಿಗಳು ಎಂದು ಬಯಲಾಗಿದೆ. ದುಬೈನಲ್ಲಿ ತರುಣ್ ರಾಜು ಆರ್ಥಿಕ ವ್ಯವಹಾರ ನಡೆಸುತ್ತಿದ್ದ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅತ್ಯಂತ ಸುಲಭವಾಗಿ ನಟಿ ರನ್ಯಾ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದಳು ಎನ್ನುವುದು ತಿಳಿದು ಬಂದಿದೆ.