ಬೆಂಗಳೂರು : ಬೆಂಗಳೂರಿನ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್ ನಿಂದ ಪ್ರಯಾಣಿಕನೊಬ್ಬ ತನ್ನ ಬ್ಯಾಗ್ ನಲ್ಲಿ ಅಕ್ರಮವಾಗಿ ಎರಡೂವರೆ ಕೆಜಿ ಗಾಂಜಾವನ್ನು ತಂದಾಗ ಕಸ್ಟಮ್ಸ್ ಅಧಿಕಾರಿಗಳ ತಪಾಸಣೆಯ ವೇಳೆ ಸಿಗಿ ಬಿದ್ದಿದ್ದಾನೆ.
ಬೆಂಗಳೂರಿನ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡುವರೆ ಕೆಜಿ ಕಾಂಜಾ ಪತ್ತೆಯಾಗಿದೆ. ಬ್ಯಾಂಕಾಕ್ ನಿಂದ ಪ್ರಯಾಣಿಕ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದ ತನ್ನ ಬ್ಯಾಗ್ ನ ಕೆಳಭಾಗದಲ್ಲಿ ಅಂಟಿಸಿ ಗಾಂಜಾ ತಂದಿದ್ದ. ವಿಮಾನ ನಿಲ್ದಾಣದಲ್ಲಿ ಪೊಲೀಸರ ಪರಿಶೀಲನೆ ವೇಳೆ ಗಾಂಜಾ ಪತ್ತೆಯಾಗಿದೆ. ಸದ್ಯ ಕೆಂಪೇಗೌಡ ಏರ್ಪೋರ್ಟ್ ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ.








