ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯ ನಾಚಿಕೆ ಪಡುವಂತಹ ತಲೆತಗ್ಗಿಸುವಂತಹ ಘಟನೆ ನಡೆದಿದ್ದು ಬಿಜೆಪಿ ರಾಮಚಂದ್ರರಾವ್ ಅವರ ರಾಸಲೀಲೆ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗುತ್ತಿದೆ. ಇದೇ ವಿಚಾರವಾಗಿ ರಾಮಚಂದ್ರರಾವ್ ಅವರನ್ನು ತಕ್ಷಣ ಸಸ್ಪೆಂಡ್ ಮಾಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಲಾಗಿದೆ.
ನಾಗರಿಕ ಹಾಗೂ ಹೋರಾಟ ಸಮಿತಿ ಅಧ್ಯಕ್ಷರಾಗಿರುವ ದಿನೇಶ್ ಕಲ್ಲಹಳ್ಳಿಯವರು ದೂರು ನೀಡಿದ್ದು, ಇದು ರಾಜ್ಯ ಸರ್ಕಾರಕ್ಕೆ ನಾಚಿಕೆಗೇಡಿನ ಸಂಗತಿ ಈ ಕೂಡಲೇ ರಾಜ್ಯ ಸರ್ಕಾರ ರಾಮಚಂದ್ರ ಅವರನ್ನು ತಕ್ಷಣ ಅಮಾನತುಗೊಳಿಸಬೇಕು, ಪ್ರಕರಣದ ಕುರಿತು ಉನ್ನತ ತನಿಖೆಗೆ ವಹಿಸಬೇಕು. ಗೃಹ ಇಲಾಖೆ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಒಳ್ಳೆಯ ಹೆಸರಿರುವಂತಹ ಕರ್ನಾಟಕ ಪೊಲೀಸ್ ಇಲಾಖೆ ಇಂತಹ ಅಧಿಕಾರಿಗಳಿಂದ ಮಾನ ಮರ್ಯಾದೆ ಹರಾಜು ಆಗುತ್ತಿದೆ.
ಕೂಡಲೇ ರಾಜ್ಯ ಸರ್ಕಾರ ಉನ್ನತ ಮಟ್ಟದ ತಣಿಕೆಗೆ ವಹಿಸಬೇಕು ದಕ್ಷ ಮತ್ತು ಪ್ರಮಾಣಿಕ ಅಧಿಕಾರಿಗಳಿಂದ ಇಡೀ ಪ್ರಕರಣವನ್ನು ತನಿಖೆ ಮಾಡಬೇಕು ಎಂದು ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದೇನೆ.ಸರ್ಕಾರ ಈ ಪ್ರಕರಣದಲ್ಲಿ ಯಾವುದೇ ರೀತಿಯಾದಂತಹ ಲೋಪ ಇಲ್ಲದಂತೆ ಪ್ರಕರಣವನ್ನು ಸೂಕ್ತ ಮಟ್ಟದಲ್ಲಿ ತನಿಖೆ ನಡೆಸಬೇಕು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.








