Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ 2.84 ಲಕ್ಷ ಹುದ್ದೆಗಳು ಖಾಲಿ !

25/03/2026 4:15 AM

BREAKING: ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

24/03/2026 11:13 PM

BREAKING : ಅತ್ಯಂತ ದುಬಾರಿ ಟಿ20 ಫ್ರಾಂಚೈಸಿ ಹಾದಿಯಲ್ಲಿ ‘RCB’ ; 16,706 ಕೋಟಿ ರೂ.ಗೆ ‘ಆದಿತ್ಯ ಬಿರ್ಲಾ’ ಪಾಲು

24/03/2026 10:01 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : 2028ಕ್ಕೆ ಮಹಿಳೆಯರಿಗೆ 50% ಮೀಸಲಾತಿ ಜಾರಿ : ಸಿಎಂ ಸಿದ್ದರಾಮಯ್ಯ ಘೋಷಣೆ!
KARNATAKA

BIG NEWS : 2028ಕ್ಕೆ ಮಹಿಳೆಯರಿಗೆ 50% ಮೀಸಲಾತಿ ಜಾರಿ : ಸಿಎಂ ಸಿದ್ದರಾಮಯ್ಯ ಘೋಷಣೆ!

By kannadanewsnow5720/11/2024 6:00 AM

ಬೆಂಗಳೂರು : ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮಹಿಳೆಯರಿಗೆ ಶೇ. 50 ರಷ್ಟು ಮೀಸಲಾತಿ ಜಾರಿಗೆ ತರಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಭಾರತ್ ಜೋಡೋ ಭವನದಲ್ಲಿರುವ ಇಂದಿರಾಗಾಂಧಿ ಅಡಿಟೋರಿಯಂನಲ್ಲಿ ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಘಟಕ ಆಯೋಜಿಸಿದ್ದ ಮಾಜಿ ಪ್ರಧಾನಿ ಇಂದಿರಾಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಹಿಳೆಯರಿಗೆ ಮೀಸಲಾತಿಯನ್ನು 2028 ರಲ್ಲಿ ಕೊಡುವುದಾಗಿ ಹೇಳುವ ನರೇಂದ್ರ ಮೋದಿ ಅವರು ಅದನ್ನು ಈಗಲೇ ಮಾಡಬಹುದಿತ್ತು. ಅದಕ್ಕೆ ರಾಜಕೀಯ ಇಚ್ಛಾಶಕ್ತಿ ಹಾಗೂ ಬದ್ಧತೆ ಅಗತ್ಯವಿದೆ. ಸಂಸತ್ತಿನಲ್ಲಿ ಮಹಿಳೆಯರಿಗೆ 50% ಮೀಸಲಾತಿ ನೀಡಲು ನಮ್ಮ ತಕರಾರೇನಿಲ್ಲ, ನಾವೇ ಇದನ್ನು ಜಾರಿಗೆ ತರಬೇಕು ಎಂದಿದ್ದೆವು. ಜಿಲ್ಲಾ ಪಂಚಾಯತಿ, ಪಟ್ಟಣ ಪಂಚಾಯತಿಗಳಲ್ಲಿ 50% ಮೀಸಲಾತಿ ಇದೆ. ಮಹಿಳೆಯರಿಗೆ ಸಮಾನ ಅವಕಾಶಗಳು ದೊರಕಬೇಕು. ಸಂಸತ್ತು, ವಿಧಾನಸಭೆಯಲ್ಲಿಯೂ ಮೀಸಲಾತಿ ನೀಡಲು ನಮ್ಮ ತಕರಾರು ಇಲ್ಲ ಎಂದರು.

ದೇಶದ ಐಕ್ಯತೆಗಾಗಿ ಪ್ರಾಣವನ್ನೇ ತ್ಯಾಗ ಮಾಡಿದ ಇಂದಿರಾ ಗಾಂಧಿಯವರ ಬದುಕು ನಮ್ಮೆಲ್ಲರಿಗೂ ಆದರ್ಶ. ಅವರು ಕೆಚ್ಚೆದೆಯಿಂದ ದೇಶವನ್ನು ಆಳಿದರು ಎನ್ನುವುದನ್ನು ಮರೆಯಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷ ಸದಾ ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು, ರೈತರ ಪರವಾಗಿರುವ ಪಕ್ಷ. ಸಂವಿಧಾನದಲ್ಲಿ ಅಪಾರವಾದ ನಂಬಿಕೆ ಇಟ್ಟುಕೊಂಡು ಸಂವಿಧಾನದ ರೀತ್ಯಾ ಕೆಲಸ ಮಾಡುತ್ತಿರುವ ಪಕ್ಷ. ಯಾರೇ ಅಧಿಕಾರಕ್ಕೆ ಬಂದರೂ ಸಂವಿಧಾನದ ರೀತ್ಯಾ ಕೆಲಸ ಮಾಡಬೇಕು. ಅದರ ಧ್ಯೇಯೋದ್ದೇಶಗಳನ್ನು ಜಾರಿ ಮಾಡಬೇಕು. ಪ್ರತಿಯೊಬ್ಬರೂ ಇದನ್ನು ಪಾಲನೆ ಮಾಡಬೇಕಾದದ್ದು ಕರ್ತವ್ಯ.

ಇಂದಿರಾ ಗಾಂಧಿಯವರು ಬಡವರ ಪರವಾಗಿ ಬಹಳಷ್ಟು ಕೆಲಸಗಳನ್ನು ಮಾಡಿದ್ದಾರೆ. ಭೂ ಸುಧಾರಣಾ ಕಾಯ್ದೆ, ಗರೀಬಿ ಹಟಾವೋ ಕಾರ್ಯಕ್ರಮ, ಬ್ಯಾಂಕುಗಳ ರಾಷ್ಟ್ರೀಕರಣ ಮುಂತಾದವುಗಳ ಫಲ ಬಡವರಿಗೆ ದೊರಕಬೇಕು. ಬಡವರು ಆರ್ಥಿಕವಾಗಿ ಸಾಮಾಜಿಕವಾಗಿ ಶಕ್ತಿಯನ್ನು ಪಡೆದುಕೊಳ್ಳಬೇಕೆಂಬ ಉದ್ದೇಶ ಅವರಿಗೆ ಇತ್ತು. ಬ್ಯಾಂಕುಗಳು ರಾಷ್ಟ್ರೀಕರಣವಾಗುವ ಮೊದಲು ಬಡವರು ಬ್ಯಾಂಕುಗಳ ಮೆಟ್ಟಿಲುಗಳನ್ನು ಹತ್ತಲು ಸಾಧ್ಯವಾಗುತ್ತಿರಲಿಲ್ಲ. ಇಂದಿರಾ ಗಾಂಧಿಯವರು ರಾಷ್ಟ್ರೀಕರಣ ಮಾಡಿದ ನಂತರ ಬ್ಯಾಂಕುಗಳ ಬಾಗಿಲು ಬಡವರಿಗೂ ತೆರೆಯಿತು. ಇದು ಕಾಂಗ್ರೆಸ್ ಪಕ್ಷದ ಸಾಧನೆ ಎಂದು ತಿಳಿಸಿದರು.

ಈಗ ಅಧಿಕಾರದಲ್ಲಿರುವ ಬಿಜೆಪಿ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಆಶಯಗಳಿಗೆ ತದ್ವಿರುದ್ಧವಾಗಿದೆ. ಹೀಗಾಗಿ ಅವರು ಬಡವರ ಪರವಾಗಿ, ಸಾಮಾಜಿಕ ನ್ಯಾಯದ ಪರವಾಗಿ ಇರಲು ಸಾಧ್ಯವೇ ಇಲ್ಲ. ಬಿಜೆಪಿ ಸಂವಿಧಾನ ಬದಲಾಗಬೇಕೆಂದು ಬಯಸುವ ಪಕ್ಷ. ನಮಗೆ ಅಧಿಕಾರ ವಿಕೇಂದ್ರೀಕರಣದಲ್ಲಿ ನಂಬಿಕೆಯಿದ್ದರೆ, ಬಿಜೆಪಿಗೆ ಕೇಂದ್ರೀಕೃತ ವ್ಯವಸ್ಥೆಯಲ್ಲಿ ನಂಬಿಕೆ ಇದೆ ಎಂದರು.

ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ಮೇಲೆ ಆರ್ಥಿಕ ಅಧಿಕಾರ ಕೇಂದ್ರೀಕೃತಗೊಳ್ಳುತ್ತಿದೆ. ನೆಹರೂ, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಇಲ್ಲದೇ ಹೋಗಿದ್ದರೆ ಈ ದೇಶದಲ್ಲಿ ಅಧಿಕಾರ ವಿಕೇಂದ್ರೀಕರಣ ಆಗಲು ಸಾಧ್ಯವಾಗುತ್ತಿರಲಿಲ್ಲ. ಮಹಾತ್ಮ ಗಾಂಧಿ ದೇಶದಲ್ಲಿ ಗ್ರಾಮ ಸ್ವರಾಜ್ಯವಾಗಬೇಕೆಂದು ಬಯಸಿದ್ದರು. ಮಹಿಳೆಯರಿಗೆ ಮೀಸಲಾಗಿ ಕೊಟ್ಟಿದ್ದೇ ಕಾಂಗ್ರೆಸ್ ಪಕ್ಷ ಎಂದು ಹೇಳಿದರು.

ರಾಜೀವ್ ಗಾಂಧಿಯವರು ಅಧಿಕಾರದಲ್ಲಿದ್ದಾಗ ಸಂವಿಧಾನಕ್ಕೆ ತಿದ್ದುಪಡಿ ತಂದು ಅಧಿಕಾರ ವಿಕೇಂದ್ರೀಕರಣದ ಮೂಲಕ ಪಟ್ಟಣ ಪಂಚಾಯತಿ, ನಗರಸಭೆಗಳಿಗೆ ಮಹಿಳಾ ಮೀಸಲಾತಿ ನೀಡಿದರು. ಇದಾಗದೇ ಹೋಗಿದ್ದರೆ ಮಹಿಳೆಯರಿಗೆ 55% ಮೀಸಲಾತಿ ದೊರೆಯುತ್ತಿರಲಿಲ್ಲ. ರಾಮಾ ಜೋಯಿಸ್ ಎಂಬ ಬಿಜೆಪಿ ಸಂಸದರು ಇದನ್ನು ಪ್ರಶ್ನಿಸಿ ಸರ್ವೋಚ್ಛ ನ್ಯಾಯಾಲಯಕ್ಕೆ ಹೋಗಿದ್ದರು.
ಅಧಿಕಾರ ಹಂಚಿಕೆಯಾಗಬೇಕೆಂದಿದ್ದರೆ ಅವರು ನ್ಯಾಯಾಲಯಕ್ಕೆ ಯಾಕೆ ಹೋಗುತ್ತಿದ್ದರು?

ಕಾಂಗ್ರೆಸಿನ ಕೆಲವರಲ್ಲಿ ಸೈದ್ಧಾಂತಿಕ ಸ್ಪಷ್ಟತೆ ಇಲ್ಲದ ಕಾರಣಕ್ಕೆ ಅವರು ಹಾಗೂ ಇರಲಿ, ಹೀಗೂ ಇರಲಿ ಎನ್ನುತ್ತಾರೆ. ಸ್ಪಷ್ಟತೆ ಇಲ್ಲದೇ ಹೋದರೆ ಕಾಂಗ್ರೆಸ್ ಸಿದ್ಧಾಂತವನ್ನು ಬೆಳೆಸಲು ಸಾಧ್ಯವಿಲ್ಲ. ಬಿಜೆಪಿ ಮಹಿಳೆಯರ, ಬಡವರ ವಿರೋಧಿಗಳು ಎಂಬುದನ್ನು ಜನರಿಗೆ ಅರ್ಥಮಾಡಿಸಬೇಕು ಎಂದರು.

ಬಿಜೆಪಿ ನಾಯಕರು ದೇಶಭಕ್ತಿಯ ಬಗ್ಗೆ ಉದ್ದನೆಯ ಭಾಷಣ ಮಾಡುತ್ತಾರೆ ಅಷ್ಟೇ. ದೇಶಭಕ್ತಿ ಉಳಿದಿದ್ದರೆ ಅದು ಕಾಂಗ್ರೆಸ್ ಪಕ್ಷದಿಂದ ಮಾತ್ರ. ಇದರ ಆಧಾರದ ಮೇಲೆ ಈ ದೇಶವನ್ನು , ನಾಡನ್ನು ಕಟ್ಟಬೇಕಾಗುತ್ತದೆ. ಇಂದಿರಾ ಗಾಂಧಿಯವರನ್ನು ನೆನೆಸಿಕೊಂಡು ಅವರಿಂದ ಸ್ಪೂರ್ತಿಯನ್ನು ಪಡೆದುಕೊಳ್ಳಬೇಕಾಗುತ್ತದೆ ಎಂದು ಹೇಳಿದರು.

BIG NEWS : 2028ಕ್ಕೆ ಮಹಿಳೆಯರಿಗೆ 50% ಮೀಸಲಾತಿ ಜಾರಿ : ಸಿಎಂ ಸಿದ್ದರಾಮಯ್ಯ ಘೋಷಣೆ! BIG NEWS: Implementation of 50% reservation for women by 2028: CM Siddaramaiah's announcement!
Share. Facebook Twitter LinkedIn WhatsApp Email

Related Posts

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ 2.84 ಲಕ್ಷ ಹುದ್ದೆಗಳು ಖಾಲಿ !

25/03/2026 4:15 AM2 Mins Read

BIG NEWS : ನಮ್ಮ ಮೆಟ್ರೋ 3ನೇ ಹಂತಕ್ಕಾಗಿ ಜಪಾನ್ ಜೊತೆ 6775 ಕೋಟಿ ರೂ. ಸಾಲ ಒಪ್ಪಂದಕ್ಕೆ ಸಹಿ ಹಾಕಿದ ಭಾರತ!

24/03/2026 9:29 PM1 Min Read

ವಿಮಾನ ದುರಂತದಲ್ಲಿ ಅಜಿತ್ ಪವಾರ್ ಸಾವು ಕೇಸ್ ಟ್ವಿಸ್ಟ್ : ಬೆಂಗಳೂರಲ್ಲಿ ದೂರು ದಾಖಲಿಸಿದ ಅಳಿಯ ರೋಹಿತ್ ಪವಾರ್!

24/03/2026 9:16 PM1 Min Read
Recent News

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ 2.84 ಲಕ್ಷ ಹುದ್ದೆಗಳು ಖಾಲಿ !

25/03/2026 4:15 AM

BREAKING: ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

24/03/2026 11:13 PM

BREAKING : ಅತ್ಯಂತ ದುಬಾರಿ ಟಿ20 ಫ್ರಾಂಚೈಸಿ ಹಾದಿಯಲ್ಲಿ ‘RCB’ ; 16,706 ಕೋಟಿ ರೂ.ಗೆ ‘ಆದಿತ್ಯ ಬಿರ್ಲಾ’ ಪಾಲು

24/03/2026 10:01 PM

BREAKING : ಆದಿತ್ಯ ಬಿರ್ಲಾ ತೆಕ್ಕೆಗೆ ಜಾರಿದ ‘RCB’ ; ಐತಿಹಾಸಿಕ 16,896 ಕೋಟಿ ಬೆಲೆಗೆ ಸೇಲ್.!

24/03/2026 9:55 PM
State News
KARNATAKA

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ 2.84 ಲಕ್ಷ ಹುದ್ದೆಗಳು ಖಾಲಿ !

By kannadanewsnow5725/03/2026 4:15 AM KARNATAKA 2 Mins Read

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗೆಗಿನ ಅಧಿಕೃತ ಮಾಹಿತಿ ಈಗ ಹೊರಬಿದ್ದಿದ್ದು, ಒಟ್ಟು 2,84,881…

BIG NEWS : ನಮ್ಮ ಮೆಟ್ರೋ 3ನೇ ಹಂತಕ್ಕಾಗಿ ಜಪಾನ್ ಜೊತೆ 6775 ಕೋಟಿ ರೂ. ಸಾಲ ಒಪ್ಪಂದಕ್ಕೆ ಸಹಿ ಹಾಕಿದ ಭಾರತ!

24/03/2026 9:29 PM

ವಿಮಾನ ದುರಂತದಲ್ಲಿ ಅಜಿತ್ ಪವಾರ್ ಸಾವು ಕೇಸ್ ಟ್ವಿಸ್ಟ್ : ಬೆಂಗಳೂರಲ್ಲಿ ದೂರು ದಾಖಲಿಸಿದ ಅಳಿಯ ರೋಹಿತ್ ಪವಾರ್!

24/03/2026 9:16 PM

ಬಾಬು ಜೀ, ಡಾ.ಬಿ.ಆರ್‌.ಅಂಬೇಡ್ಕರ್ ಜನ್ಮ ದಿನ ; ಅದ್ದೂರಿ ಆಚರಣೆಗೆ ಮದ್ದೂರು ತಾಲೂಕು ಆಡಳಿತ ಸಿದ್ದತೆ

24/03/2026 8:49 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.