ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದ್ದು, ಇಂದು ಮುಖ್ಯಮಂತ್ರಿಗಳಿಗೆ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಅಭಿನಂದನೆ ಸಲ್ಲಿಸಲಾಗಿದೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಆರೋಗ್ಯ ಸಂಜೀವಿನಿ ಯೋಜನೆ (KASS) ಜಾರಿಗೊಳಿಸುವ ಸಂಬಂಧ ಇಂದು ನೆಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ ಎಸ್ ಷಡಾಕ್ಷರಿ ರವರು ಮತ್ತು ರಾಜ್ಯ ಸಂಘದ ಪದಾಧಿಕಾರಿಗಳಿಂದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯರವರನ್ನು ಗೃಹ ಕಚೇರಿಯಲ್ಲಿ ಭೇಟಿ ಮಾಡಿ ಅಭಿನಂದಿಸಲಾಯಿತು.
ಇದೇ ಸಂದರ್ಭದಲ್ಲಿ ಮಾನ್ಯ ಮುಖ್ಯಮಂತ್ರಿಗಳು ಮುಂದಿನ ತಿಂಗಳು ಏಪ್ರಿಲ್ ನಲ್ಲಿ ರಾಜ್ಯ ಸರ್ಕಾರಿ ನೌಕರರು ಹಾಗೂ ಅವಲಂಬಿತ ಕುಟುಂಬ ವರ್ಗದವರಿಗೆ ಈ ಯೋಜನೆಯನ್ನು ಲೋಕಾರ್ಪಣೆ ಮಾಡುವ ಭರವಸೆ ನೀಡಿದರು.