ನವದೆಹಲಿ: ಲೋಕಸಭೆಯಲ್ಲಿ ಗದ್ದಲದ ನಡುವೆ ಬಿಜೆಪಿ ಸಂಸದ ಅರುಣ್ ಗೋವಿಲ್ ಅವರು ಪ್ರಶ್ನೋತ್ತರ ವೇಳೆಯಲ್ಲಿ ಸಾಮಾಜಿಕ ಮಾಧ್ಯಮ ಮತ್ತು ಒಟಿಟಿ ವೇದಿಕೆಗಳಲ್ಲಿ ಅಶ್ಲೀಲ ವಿಷಯ ತಡೆಯು ಕುರಿತ ವಿಷಯವನ್ನು ಪ್ರಸ್ತಾಪಿಸಿದರು.
ಅರುಣ್ ಗೋವಿಲ್ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅವರು, ಲೋಕಸಭೆಯಲ್ಲಿ ಸಾಮಾಜಿಕ ಮಾಧ್ಯಮ ಮತ್ತು ಒಟಿಟಿ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ ವಿಷಯವನ್ನು ತಡೆಯುವ ಸರ್ಕಾರದ ಪ್ರಯತ್ನಗಳಿಗೆ ಅಸ್ತಿತ್ವದಲ್ಲಿರುವ ಕಾನೂನುಗಳನ್ನು ಬಲಪಡಿಸುವ ಅಗತ್ಯವಿದೆ ಎಂದು ಹೇಳಿದರು.
Minister @AshwiniVaishnaw replies to the questions asked by member @arungovil12 during #QuestionHour in #LokSabha regarding Laws to Check Vulgar Content on Social Media. @ombirlakota @loksabhaspeaker @LokSabhaSectt @MIB_India pic.twitter.com/xu6wEzGNy1
— SansadTV (@sansad_tv) November 27, 2024
ಒಟಿಟಿಯಲ್ಲಿ ಅಶ್ಲೀಲ ಕಂಟೆಂಟ್ ಬರುವ ನಮ್ಮ ದೇಶದ ಸಂಸ್ಕೃತಿಗೂ ಆ ದೇಶಗಳ ಸಂಸ್ಕೃತಿಗೂ ಸಾಕಷ್ಟು ವ್ಯತ್ಯಾಸವಿದೆ. ಸ್ಥಾಯಿ ಸಮಿತಿಯು ಈ ವಿಷಯವನ್ನು ಕೈಗೆತ್ತಿಕೊಳ್ಳಬೇಕೆಂದು ನಾನು ಬಯಸುತ್ತೇನೆ ಎಂದು ಅಶ್ವಿನಿ ವೈಷ್ಣವ್ ಹೇಳಿದರು. ಈಗಿರುವ ಕಾನೂನನ್ನು ಬಲಪಡಿಸಬೇಕು ಮತ್ತು ಈ ಬಗ್ಗೆ ಒಮ್ಮತಕ್ಕೆ ಒತ್ತಾಯಿಸುತ್ತೇನೆ. ಸಾಮಾಜಿಕ ಜಾಲತಾಣಗಳಲ್ಲೂ ಅಶ್ಲೀಲ ವಿಷಯಗಳು ಹರಿದಾಡುತ್ತಿವೆ ಎಂದು ಸಚಿವರು ಹೇಳಿದ್ದಾರೆ.