ಬೆಂಗಳೂರು : ಏಪ್ರಿಲ್ 11 ರ ನಾಳೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಬೆಯಲ್ಲಿ ಬಹುನಿರೀಕ್ಷಿತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ (ಜಾತಿಗಣತಿ ವರದಿ-2015) ವರದಿ ಮಂಡನೆಯಾಗಲಿದೆ.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಬರೋಬ್ಬರಿ 169 ಕೋಟಿ ರೂ.ಗಳ ವೆಚ್ಚದಲ್ಲಿ ಸಿದ್ದಪಡಿಸಿರುವ ಜಾತಿಗಣತಿ ವರದಿಯನ್ನು ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮಂಡಿಸಲಿದ್ದಾರೆ.
ದತ್ತಾಂಶಗಳ ಅಧ್ಯಯನ ವರದಿ ಪರಿಶೀಲನೆ ಬಳಿಕ ಅನುಷ್ಠಾನ ಕುರಿತು ಸಚಿವ ಸಂಪುಟ ಸಭೆ ಯಾವ ನಿರ್ಧಾರ ಕೈಗೊಲ್ಳಲಿದೆ ಎಂಬುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.