ಬೆಂಗಳೂರು : ಆಯುಕ್ತಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ, ನೌಕರರು ಇನ್ಮುಂದೆ ರಜೆ ಮಂಜೂರಾತಿಯನ್ನು ಕಡ್ಡಾಯವಾಗಿ ಇ ಆಫೀಸ್ ತಂತ್ರಜ್ಞಾನದಲ್ಲಿ ಸಲ್ಲಿಸುವ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಆಯುಕ್ತಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ/ ನೌಕರರು ಇನ್ನು ಮುಂದೆ ಕಡ್ಡಾಯವಾಗಿ ಇ ಆಫೀಸ್ ತಂತ್ರಾಂಶದಲ್ಲಿ ಎಲ್ಲಾ ರೀತಿಯ ರಜೆ ಕೋರಿಕೆಯನ್ನು ಸಲ್ಲಿಸಿ ಮೇಲಾಧಿಕಾರಿಗಳ ಮಂಜೂರಾತಿ ಪಡೆಯುವುದು ಕಡ್ಡಾಯವಾಗಿದೆ ಎಂದು ತಿಳಿಸಲಾಗಿದೆ.
ಇ ಆಫೀಸ್ ತಂತ್ರಾಂಶದಲ್ಲಿ ಯಾವುದೇ ರೀತಿಯ ತೊಂದರೆಗಳ ನಿವಾರಣೆಗೆ ಶ್ರೀ ಹರೀಶ್ ತಂತ್ರಜ್ಞರು ಇ ಆಫೀಸ್ ಇವರನ್ನು ಸಂರ್ಪರ್ಕಿಸಲು ಸೂಚನೆ ನೀಡಲಾಗಿದೆ.