ಬೆಂಗಳೂರು : ಒಂದು ವರ್ಷ ಕಡ್ಡಾಯ ಸರ್ಕಾರಿ ಸೇವೆ ಸಲ್ಲಿಸುವ ಅಭ್ಯರ್ಥಿಗಳು ಪುನಃ ಕರ್ತವ್ಯಕ್ಕೆ ವರದಿ ಮಾಡಿಸಿಕೊಳ್ಳುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿಂತೆ, 2023ನೇ ಸಾಲಿನಲ್ಲಿ ಎಂ.ಬಿ.ಬಿ.ಎಸ್. ವ್ಯಾಸಂಗ ಪೂರೈಸಿದ ಅಭ್ಯರ್ಥಿಗಳಿಗೆ ಒಂದು ವರ್ಷ ಕಡ್ಡಾಯ ಸರ್ಕಾರಿ ಸೇವೆ ಸಲ್ಲಿಸಲು ಮೇಲಿನ ಉಲ್ಲೇಖದನ್ವಯ ಸ್ಥಳ ನಿಯುಕ್ತಿಗೊಳಿಸಲಾಗಿರುತ್ತದೆ. ಅವರುಗಳಲ್ಲಿ ಕೆಲವು ಅಭ್ಯರ್ಥಿಗಳು ಉನ್ನತ ವ್ಯಾಸಂಗದ ಪರೀಕ್ಷಾ ಪೂರ್ವ ತಯಾರಿ ಹಾಗೂ ಇತರೆ ಕಾರಣಗಳಿಂದ ಕರ್ತವ್ಯಕ್ಕೆ ಗೈರು ಹಾಜರಾಗಿರುತ್ತಾರೆ. ಗೈರು ಹಾಜರಿಯ ನಂತರ ಪುನಃ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಹಾಗೂ ಅಭ್ಯರ್ಥಿಗಳು ಅನುಮತಿ ನೀಡುವಂತೆ ಕೋರಿ ಈ ಆಯುಕ್ತಾಲಯಕ್ಕೆ ಮನವಿ ಸಲ್ಲಿಸಿರುತ್ತಾರೆ.
ಅದರಂತೆ, ಅನುಬಂಧದಲ್ಲಿ ನಮೂದಿಸಿರುವ 45 ಅಭ್ಯರ್ಥಿಗಳಿಗೆ ಅವರು ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಸ್ಥಳದಲ್ಲಿಯೇ ಪುನಃ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲು ಅನುಮತಿಸಿದ. ಸದರಿ ಪಟ್ಟಿಯಲ್ಲಿರುವ ಅಭ್ಯರ್ಥಿಗಳ ವಿವರಗಳನ್ನು ಉಲ್ಲೇಖದನ್ವಯ ಪರಿಶೀಲಿಸಿ ಅವರುಗಳ ಹೆಸರು, ನೋಂದಣಿ ಸಂಖ್ಯೆ ಮತ್ತು ನಿಯುಕ್ತಿಗೊಂಡ ಸ್ಥಳಗಳನ್ನು ಖಚಿತ ಪಡಿಸಿಕೊಂಡು ಈ ಅಧಿಕೃತ ಜ್ಞಾಪನಾ ಪತ್ರದ ದಿನಾಂಕದಿಂದ 10 ದಿನಗಳೊಳಗೆ ಕರ್ತವ್ಯಕ್ಕೆ ಪುನಃ ವರದಿ ಮಾಡಿಸಿಕೊಳ್ಳಲು ಸೂಚಿಸಿದೆ.
ತಮ್ಮ ಅಧೀನ ಸಂಸ್ಥೆಗಳಲ್ಲಿ ಒಂದು ವರ್ಷ ಕಡ್ಡಾಯ ಸರ್ಕಾರಿ ಸೇವೆಗೆ ಸ್ಥಳ ನಿಯುಕ್ತಿಗೊಂಡು ಕರ್ತವ್ಯಕ್ಕೆ ವರದಿ ಮಾಡಿಕೊಂಡ/ಮಾಡಿಕೊಳ್ಳದ ಅಭ್ಯರ್ಥಿಗಳ ವಿವರವನ್ನು ಈ ಆಯುಕ್ತಾಲಯಕ್ಕೆ ಸಲ್ಲಿಸಲು ಸೂಚಿಸಿದೆ.