ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ನೂತನ ಪಿಂಚಣಿ ಯೋಜನೆ ರದ್ದು ಮಾಡಿ, ಹಳೆಯ ಪಿಂಚಣಿ ಯೋಜನೆ ಜಾರಿ ಬಗ್ಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ.
ಬೆಳಗಾವಿ ಚಳಿಗಾಲದ ಅಧಿವೇಶನದ ವಿಧಾನಸಭೆಯಲ್ಲಿನ ಪ್ರಶ್ನೋತ್ತರ ಕಲಾಪದಲ್ಲಿ ವೇದವ್ಯಾಸ್ ಕಾಮತ್ ಅವರ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಜಾರಿಯಲ್ಲಿರುವ ರಾಷ್ಟ್ರೀಯ ಯೋಜನೆಗೆ ಸೂಕ್ತ ಬದಲಾವಣೆ / ಮಾರ್ಪಾಡು ಮಾಡಲು ಸಮಗ್ರವಾಗಿ ಪರಿಶೀಲಿಸಲು ಈಗಾಗಲೇ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ದಿನಾಂಕ: 11.12.20180 : 01.03.2023 ಆದೇಶಗಳನ್ವಯ ರಚಿಸಲಾಗಿರುವ ಸಮಿತಿಯನ್ನು ದಿನಾಂಕ: 16.08.2024ರಲ್ಲಿ ಪುನರ್ ರಚಿಸಿ ಆದೇಶಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.









