ಬೆಂಗಳೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿ ಬಗ್ಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಯಲಿದೆ.
ಹೌದು,ಇಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ವಿಷಯಕ್ಕೆ ಸಂಬಂಧಪಟ್ಟಂತೆ ಮಹತ್ವದ ಸಭೆ ನಡೆಯಲಿದೆ. ಸಭೆಯಲ್ಲಿ ಹಲವು ಸಚಿವರು ಭಾಗಿಯಾಗಲಿದ್ದಾರೆ.
ಒಳಮೀಸಲಾತಿಗಾಗಿ ದಶಕಗಳಿಂದ ಹೋರಾಟ ನಡೆಯುತ್ತಿದೆ. ಈಗ ಸುಪ್ರೀಂಕೋರ್ಟ್ ಕೂಡ ತೀರ್ಪು ನೀಡಿದೆ. ನಾವು ಜಾರಿ ಮಾಡಲೇಬೇಕಿದೆ. 101 ಪರಿಶಿಷ್ಟ ಜಾತಿಗಳಿವೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಮುಖ್ಯ. ಎಲ್ಲರನ್ನೂ ಸಮಾಧಾನ ಮಾಡುವುದು ಸಾಧ್ಯವಿಲ್ಲದಿದ್ದರೂ, ಶೇ.90 ರಷ್ಟು ಸಮುದಾಯಗಳಿಗೆ ಸಮಾಧಾನ ಆಗುವ ತೀರ್ಮಾನ ತೆಗೆದುಕೊಳ್ಳಬೇಕಿದೆ. ಇದನ್ನು ನಮ್ಮ ಸರ್ಕಾರ ಮಾಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಈ ಹಿಂದೆ ಹೇಳಿದ್ದರು.