ಬೆಂಗಳೂರು : ರಾಜ್ಯದಲ್ಲಿ ಮಳೆಹಾನಿ ಸಂಬಂಧ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಿದ್ದಾರೆ.
2025ರ ಮುಂಗಾರು ಅವಧಿಯಲ್ಲಿ ರಾಜ್ಯದಲ್ಲಿ ಅತಿವೃಷ್ಟಿಯಿಂದ ಉಂಟಾದ ಹಾನಿ ಹಾಗೂ ತೆಗೆದುಕೊಂಡ ಕ್ರಮಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಎಲ್ಲಾ ವಿಭಾಗಾಧಿಕಾರಿಗಳು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಸಿಇಒ ಗಳ ಜೊತೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ, ಮಾಹಿತಿ ಪಡೆದರು.
ಮಳೆಯಿಂದ ಹಾನಿಯಾದ ಪ್ರದೇಶಗಳಲ್ಲಿ ಪರಿಹಾರ ಕಾರ್ಯ, ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳು, ಸಿಇಒಗಳ ಜೊತೆಗೆ ಚರ್ಚೆ ನಡೆಸಿದ್ದಾರೆ.
ಸಚಿವರಾದ ಚಲುವರಾಯಸ್ವಾಮಿ, ಕೃಷ್ಣ ಬೈರೇಗೌಡ, ಎಚ್ ಕೆ ಪಾಟೀಲ್ , ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್, ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಹಾಗೂ ಸಂಬಂಧಿಸಿದ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
2025ರ ಮುಂಗಾರು ಅವಧಿಯಲ್ಲಿ ರಾಜ್ಯದಲ್ಲಿ ಅತಿವೃಷ್ಟಿಯಿಂದ ಉಂಟಾದ ಹಾನಿ ಹಾಗೂ ತೆಗೆದುಕೊಂಡ ಕ್ರಮಗಳ ಬಗ್ಗೆ ಮುಖ್ಯಮಂತ್ರಿ @siddaramaiah ಅವರು ರಾಜ್ಯದ ಎಲ್ಲಾ ವಿಭಾಗಾಧಿಕಾರಿಗಳು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಸಿಇಒ ಗಳ ಜೊತೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ, ಮಾಹಿತಿ ಪಡೆದರು.
ಸಚಿವರಾದ @NCheluvarayaS,… pic.twitter.com/5RrNu75Sxe
— CM of Karnataka (@CMofKarnataka) September 8, 2025