ಬೆಂಗಳೂರು : ರಾಜ್ಯ ಸರ್ಕಾರದ ನೇಮಕಾತಿ ಪರೀಕ್ಷೆಗಳಲ್ಲಿ ಪಾರದರ್ಶಕತೆ ತರಲು ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಪ್ರಥಮ ಬಾರಿಗೆ ಕರ್ಣಾಟಕ ಪರೀಕ್ಷಾ ಪ್ರಾಧಿಕಾರದ ನೇಮಕಾತಿ ಪರೀಕ್ಷೆಗಳಲ್ಲಿ AI ತಂತ್ರಜ್ಞಾನ ಬಳಸಲಾಗಿದೆ ಎಂದು ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವುದ ಇಂಜಿನಿಯರಿಂಗ್ ತಂಡ ಮೊಬೈಲ್ ಬೇಸ್ಡ್ ಕ್ಯಾಂಡಿಡೇಟ್ ಅಥೆಂಟಿಕೇಶನ್ ವ್ಯವಸ್ಥೆಯನ್ನು ಸಿದ್ಧಪಡಿಸಿದೆ. ಕಂಪ್ಯೂಟರ್ ಆಪರೇಟರ್ ಮತ್ತು ಇತರೆ ಹುದ್ದೆಗಳ ನೇಮಕಾತಿಗೆ ನಡೆದ ಪರೀಕ್ಷೆಯಲ್ಲಿ ಪ್ರಯೋಗಾರ್ಥವಾಗಿ ಇದನ್ನು ಬಳಕೆ ಮಾಡಲಾಗಿದ್ದು, ಮೊದಲ ಪ್ರಯತ್ನ ಯಶಸ್ವಿಯಾಗಿದೆ.
ಅಭ್ಯರ್ಥಿಗಳು ಪರೀಕ್ಷಾ ಕೊಠಡಿ ಪ್ರವೇಶಿಸುವಾಗ ಸ್ಮಾರ್ಟ್ ಫೋನ್ ಬಳಕೆ ಮಾಡಿಕೊಂಡು ಅವರ ಫೋಟೋ ಸೆರೆ ಹಿಡಿಯಲಾಗುವುದು. ಇದು ಕೂಡಲೇ ಪ್ರಾಧಿಕಾರದ ಡೇಟಾ ಸರ್ವರ್ ನೊಂದಿಗೆ ಸಂಪರ್ಕಗೊಂಡು ಅರ್ಜಿ ಸಲ್ಲಿಸುವಾಗ ಅಪ್ಲೋಡ್ ಮಾಡಿರುವ ಭಾವಚಿತ್ರದೊಂದಿಗೆ ತಾಳೆ ಮಾಡಿ ನೈಜತೆ ದೃಢಪಡಿಸುತ್ತದೆ. ಮುಂದಿನ ಪರೀಕ್ಷೆಗಳಲ್ಲಿಯೂ ಇದನ್ನು ವಿಸ್ತರಣೆ ಮಾಡಲು ನಿರ್ಧರಿಸಲಾಗಿದೆ.
– ಪ್ರಥಮ ಬಾರಿಗೆ ಕರ್ಣಾಟಕ ಪರೀಕ್ಷಾ ಪ್ರಾಧಿಕಾರದ ನೇಮಕಾತಿ ಪರೀಕ್ಷೆಗಳಲ್ಲಿ AI ತಂತ್ರಜ್ಞಾನ ಬಳಸಲಾಗಿದೆ.
– ಮೊಬೈಲ್ ಆಧಾರಿತವಾಗಿ ಅಭ್ಯರ್ಥಿಗಳ ಗುರುತಿನ ದೃಢೀಕರಣ ನಡೆಸಿ ನಕಲಿ ಹಾಜರಾತಿ ತಡೆಗಟ್ಟಲಾಗಿದೆ.
– ಪರೀಕ್ಷೆ ಮುಗಿದ ಕೆಲವೇ ಗಂಟೆಗಳಲ್ಲಿ OMR Sheet ಬಿಡುಗಡೆ ಮಾಡಿ ಫಲಿತಾಂಶದ ಪಾರದರ್ಶಕತೆಯನ್ನು ಹೆಚ್ಚಿಸಲಾಗಿದೆ.
ಮುಂದಿನ ಎಲ್ಲಾ ನೇಮಕಾತಿ ಪರೀಕ್ಷೆಗಳಲ್ಲಿ ಈ ವಿಧಾನಗಳನ್ನು ಅಳವಡಿಸಲಾಗುವುದು.