ಬೆಂಗಳೂರು : ರಾಜ್ಯದಲ್ಲಿ ಕೆಲವು ಪೊಲೀಸ ಠಾಣೆಗಳು ಉತ್ತಮ ಕೆಲಸ ಮಾಡುತ್ತಿವೆ. ಆದರೆ 88 ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲಾಗಿದ್ದಾರೆ ಎಂದು ಪೊಲೀಸ್ ಹಿರಿಯ ಅಧಿಕಾರಿಗಳ ಜೊತೆಗೆ ವಾರ್ಷಿಕ ಸಭೆಯ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು.
ಇನ್ನೂ ಕೆಲವು ಠಾಣೆಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. 88 ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು ಆಗಿದ್ದು ಇದು ಸರ್ಕಾರಕ್ಕೆ ಮಾತ್ರವಲ್ಲ ಪೊಲೀಸ್ ಇಲಾಖೆಗೂ ಕೆಟ್ಟ ಹೆಸರಾಗಿದೆ ರಾಯಚೂರಿನ ಕವಿತಾಳ ಠಾಣೆ ದೇಶದಲ್ಲಿಯೇ ಮೂರನೇ ಸ್ಥಾನ ಪಡೆದುಕೊಂಡಿದೆ. ಪೊಲೀಸ ಅಧಿಕಾರಿಗಳಿಗೆ ಗೊತ್ತಾಗದೆ ಕ್ರೈಂ ನಡೆಯಲು ಸಾಧ್ಯವಿಲ್ಲ.
ಪೊಲೀಸರು ಬಲಾಡ್ಯರ ಕೈಗೊಂಬೆಯಂತೆ ಕೆಲಸ ಮಾಡಬಾರದು ನಮ್ಮಲ್ಲಿ ಕಳ್ಳತನ ಸುಳ್ಳಿಗೆ ದರೋಡೆ ಪ್ರಕರಣ ಕಡಿಮೆ ಆಗ್ತಾ ಇದೆ ಆದರೆ ಸೈಬರ್ ಕ್ರೈಂ ಮತ್ತು ಡ್ರಗ್ಸ್ ವೆಡ್ಲಿಂಗ್ ಜಾಸ್ತಿ ಆಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು.








