ಬೆಂಗಳೂರು : ಬೆಂಗಳೂರಲ್ಲಿ ಕೌಟುಂಬಿಕ ಕಲಹದಿಂದ ಬೇಸತ್ತು, ಮರಕ್ಕೆ ನೇಣು ಬಿಗಿದುಕೊಂಡು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕೆಂಗೇರಿಯಲ್ಲಿ ನಡೆದಿದೆ. ಕೆಂಗೇರಿಯಲ್ಲಿ ಮನೆಯಲ್ಲಿ ಯಾರು ಇಲ್ಲದ ವೇಳೆ ಶಿವಕುಮಾರ್ (36) ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೃತ ಶಿವಕುಮಾರ್ ಪೇಂಟರ್ ಆಗಿ ಕೆಲಸ ಮಾಡುತ್ತಿದ್ದ. ಇನ್ನು ಹೌಸ್ ಕೀಪಿಂಗ್ ಮಾಡಿಕೊಂಡಿದ್ದ ಪತ್ನಿಯ ಮೇಲೆ ಅನುಮಾನ ಪಡುತ್ತಿದ್ದ. ಇದೆ ವಿಚಾರವಾಗಿ ಆಗಾಗ ಇಬ್ಬರ ಮಧ್ಯ ಗಲಾಟೆ ನಡೆಯುತ್ತಿತ್ತು. ಪತ್ನಿ ಕೆಲಸಕ್ಕೆ ತೆರಳಿದ್ದ ವೇಳೆ ಮನೆಯ ಬಳಿ ಇರುವ ಹೊಂಗೆ ಮರಕ್ಕೆ ನೇಣು ಬಿಗಿದುಕೊಂಡು ಶಿವಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. 8 ವರ್ಷದ ಹಿಂದೆ ಮದುವೆಯಾಗಿದ್ದ ದಂಪತಿಗೆ ಇಬ್ಬರು ಪುತ್ರಿಯರಿದ್ದಾರೆ. ಕೆಂಗೇರಿ ಠಾಣೆಯಲ್ಲಿ ಅಸಹಜ ಸಾವು ಎಂದು ಕೇಸ್ ದಾಖಲಾಗಿದೆ.








