ಬೆಂಗಳೂರು : ಬೆಂಗಳೂರಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿ ಈ ಒಂದು ಅಪಘಾತ ಸಂಭವಿಸಿದೆ.
ಬಸ್ ಚಕ್ರ ಹರಿದು ಬೈಕ್ ಸವಾರ ಫಾಸರ್ (75) ಸ್ಥಳದಲ್ಲೇ ಸಾವನಪ್ಪಿದ್ದಾರೆ. ಬೆಂಗಳೂರಿನಿಂದ ಖಾಸಗಿ ಬಸ್ ಕೃಷ್ಣಗಿರಿಗೆ ತೆರಳುತ್ತಿತ್ತು. ಈ ವೇಳೆ ಬೈಕ್ ಸವಾರನೀಗೆ ಡಿಕ್ಕಿ ಹೊಡೆದು ಆತನ ಮೇಲೆ ಬಸ್ಸಿನ ಚಕ್ರ ಹರಿದು ಸ್ಥಳದಲ್ಲಿ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಈ ಒಂದು ಅಪಘಾತದ ಕುರಿತು ಹಲಸೂರು ಗೇಟ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








