ಬೆಂಗಳೂರು : ಸೆಪ್ಟೆಂಬರ್ 22 ರಿಂದ ರಾಜ್ಯಾದ್ಯಂತ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಆರಂಭವಾಗಿದ್ದು, ಈಗಾಗಲೇ ಬಹುತೇಕ ಜಿಲ್ಲೆಗಳಲ್ಲಿ ಸಮೀಕ್ಷೆ ಪೂರ್ಣಗೊಂಡಿದೆ. ಇದೀಗ ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳ ಹಿಂದೆ ಸಮೀಕ್ಷೆ ಆರಂಭಿಸಲಾಗಿದ್ದು, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸಾಮಾಜಿಕ ಶೈಕ್ಷಣಿಕ ಆರ್ಥಿಕ ಸಮೀಕ್ಷೆ ನಡೆಸಿದ್ದು ಇಂದು ಒಂದು ದಿನ 2,66,066 ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ.
ಹೌದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿನ ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ 31,815 ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ. ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ 38,374 ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ. ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ 68,639 ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ. ಇನ್ನು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ 39,315 ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ. ಅಲ್ಲದೆ ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 87,923 ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ.