ಬೆಂಗಳೂರು : ಬೆಂಗಳೂರಿನಲ್ಲಿ ಹಾಡ ಹಗಲೇ ಎರಡು ಗುಂಪುಗಳ ನಡುವೆ ಮಾರಾಮಾರಿ ಆಗಿದೆ. ಚಾಕು ಹಿಡಿದು ನಡು ರಸ್ತೆಯಲ್ಲಿಯೇ ಗ್ಯಾಂಗ್ ಹೊಡೆದಾಡಿಕೊಂಡಿದೆ. ಬೆಂಗಳೂರಿನ ಕೋಣನಕುಂಟೆ ಬೆಳೆಯ ಸೋಮಣ್ಣ ಲೇಔಟ್ ಅಲ್ಲಿ ಈ ಒಂದು ಹೊಡೆದಾಟ ಗಲಾಟೆ ನಡೆದಿದೆ.
ಆಟೋ ಮತ್ತು ಕಾರಿನಲ್ಲಿ ಬಂದು ಯುವಕರ ಮೇಲೆ ಹಲ್ಲೆ ನಡೆಸಿದ್ದಾರೆ. ಯುವಕರ ಪುಂಡಾಟದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಶನಿವಾರ ಸಂಜೆ 4 ಗಂಟೆಗೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಸಿನಿಮಾ ಸ್ಟೈಲ್ ನಲ್ಲಿ ಎರಡು ಗುಂಪುಗಳ ನಡುವೆ ಈ ಒಂದು ಗಲಾಟೆ ನಡೆದಿದೆ. ಈ ಕುರಿತು ಕೋಣನಕುಂಟೆ ಪೊಲೀಸರು ಪ್ರಕರಣದ ದಾಖಲಿಸಿಕೊಂಡು ಪುಂಡರು ಯಾರು ಎನ್ನುವುದರ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ.