ಕಲಬುರ್ಗಿ : ನಿನ್ನೆ ಕಲ್ಬುರ್ಗಿಯಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗಿದ್ದು, ಈ ವೇಳೆ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗಿದೆ. ಕಲ್ಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನಲ್ಲಿ ಹಾಗೂ ಪಕ್ಕದ ಯಡ್ರಾಮಿ ತಾಲೂಕಿನಲ್ಲಿ ಸಿಡಿಲು ಬಡಿದು ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿರುವ ಪ್ರತ್ಯೇಕ ಘಟನೆ ನಡೆದಿದೆ.
ಮೃತರನ್ನು ಜೇವರ್ಗಿ ತಾಲ್ಲೂಕಿನ ರೇವನೂರ್ ಗ್ರಾಮದ ಶ್ರೀನಾಥ್ ಹಾಗೂ ಯಡ್ರಾಮಿ ತಾಲ್ಲೂಕಿನ ಪಡಗದಳ್ಳಿಯ ಸಿದ್ದಪ್ಪ ಪೂಜಾರಿ (33) ಎಂದು ಗುರುತಿಸಲಾಗಿದೆ. ಶ್ರೀನಾಥ್, ಗುರುವಾರ ಗ್ರಾಮದ ತನ್ನ ಹೊಲಕ್ಕೆ ಹೋಗಿ ಮರಳಿ ಮನೆಗೆ ಬರುವಾಗ ಸಿಡಿಲು ಬಡಿದು ಮಾರ್ಗ ಮಧ್ಯದಲ್ಲಿಯೇ ಮೃತಪಟ್ಟಿದ್ದಾರೆ. ಸಿದ್ದಪ್ಪ ಪೂಜಾರಿ ಹೊಲದಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.