ಕೊಪ್ಪಳ : ರಾಜ್ಯಾದ್ಯಂತ ಕೆಲವು ಕಡೆ ಬಿಸಿಲು ಹೆಚ್ಚಾಗಿದ್ದು ಕೆಲವು ಪ್ರದೇಶಗಳಲ್ಲಿ ನೀರಿಗಾಗಿ ಜನರು ಪರದಾಡುತ್ತಿದ್ದಾರೆ. ಇನ್ನು ಕೆಲವು ಕಡೆ ಗುಡುಗು ಸಹಿತ ಭಾರಿ ಮಳೆ ಆಗುತ್ತಿದೆ. ಇದೀಗ ಕೊಪ್ಪಳದಲ್ಲಿ ಸಚಿವ ಶಿವರಾಜ್ ತಂಗಡಗಿ, ಕಾರು ಮುತ್ತಿಗೆ ಹಾಕಿ ಮಹಿಳೆಯರು ಆಕ್ರೋಶ ಹೊರ ಹಾಕಿದ್ದಾರೆ.
ಹೌದು, ಕೊಪ್ಪಳ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಕಾರು ತಡೆದು ಖಾಲಿ ಕೊಡ ಹಿಡಿದು ಮಹಿಳೆಯರು ಕಾರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಸಂಕನಾಳ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಶಿವರಾಜ್ ತಂಗಡಿ ಅವರ ಕಾರನ್ನು ಕಡೆದು ಮುತ್ತಿಗೆ ಹಾಕಿ ನೀರಿನ ಸಮಸ್ಯೆ ಬಗೆಹರಿಸುವಂತೆ ಅಳಲು ತೋಡಿಕೊಂಡಿದ್ದಾರೆ..
ನೀರಿನ ಸಮಸ್ಯೆಯನ್ನು ಬಗೆಹರಿಸುವಂತೆ ಮಹಿಳೆಯರು ಅಳಲು ತೋಡಿಕೊಂಡಿದ್ದಾರೆ. ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗಿದೆ ನಾವು ಬೇರೇನು ಕೇಳುತ್ತಿಲ್ಲ ಬರಿ ನೀರು ಕೇಳುತ್ತಿದ್ದೇವೆ ಎಂದು ಜನ ಸಚಿವರು ನೋವು ತೋಡಿಕೊಂಡಿದ್ದಾರೆ.








