ಮೈಸೂರು : ಮೈಸೂರಿನಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ ಮಗು ಮೇಲೆ ಏಕಾಏಕಿ ಚಿರತೆ ದಾಳಿ ನಡೆಸಿದೆ. ಚಿರತೆ ದಾಳಿಯಿಂದ ಬೈಕ್ ನಿಂದ ಕೆಳಗೆ ಬಿದ್ದ ದಂಪತಿ ಮತ್ತು ಮಗುವಿಗೆ ಗಂಭೀರವಾದ ಗಾಯಗಳಾಗಿದ್ದು ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಚುಂಚನಹಳ್ಳಿ ಬಳಿ ಈ ಒಂದು ಕಡಿಮೆ ಸಂಭವಿಸಿದೆ.
ಚಿರತೆ ದಾಳಿಯಿಂದ ರೈತ ಮಹದೇವಸ್ವಾಮಿ ಪತ್ನಿ ಮತ್ತು ಮಗುವಿಗೆ ಗಾಯಗಳಾಗಿವೆ. ಗಾಯಾಳುಗಳಿಗೆ ತಗಳೂರು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಎಚ್ಎಂಟಿಸಿಗಾಗಿ ಮೈಸೂರು ಆಸ್ಪತ್ರೆಗೆ ಸಿಬ್ಬಂದಿಗಳು ಕಳುಹಿಸಿದ್ದು ಚಿರತೆಯನ್ನು ಸೆರೆಹಿಡಿದು ಸ್ಥಳಾಂತರಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.








