ದಕ್ಷಿಣಕನ್ನಡ : ದಕ್ಷಿಣಕನ್ನಡದಲ್ಲಿ KSRTC ಬಸ್ನಲ್ಲಿ ವಿದ್ಯಾರ್ಥಿನಿಯ ಜೊತೆಗೆ ಅನುಚಿತ ವರ್ತನೆ ತೋರಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಈ ಒಂದು ಘಟನೆ ನಡೆದಿದೆ. ವಿದ್ಯಾರ್ಥಿನಿ ಜೊತೆಗೆ ಮಹಮ್ಮದ್ ತೌಹೀದ್ ನಿಂದ ಅನುಚಿತ ವರ್ತನೆ ಆರೋಪ ಕೇಳಿ ಬಂದಿದೆ.
ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಯುವತಿ ಮಂಗಳೂರಿನಿಂದ ಪುತ್ತೂರಿಗೆ ತೆರಳುತ್ತಿದ್ದಳು. ಈ ವೇಳೆ ಬಸ್ನಲ್ಲಿ ಮೊಹಮ್ಮದ್ ತೌಹೀದ್ ವಿದ್ಯಾರ್ಥಿನಿಯ ಪಕ್ಕದಲ್ಲಿ ಕುಳಿತಿದ್ದಾನೆ. ಈ ವೇಳೆ ವಿದ್ಯಾರ್ಥಿನಿಯ ಜೊತೆಗೆ ಮೊಹಮ್ಮದ್ ತೌಹಿದ್ ಅನುಚಿತವಾಗಿ ವರ್ತನೆ ಮಾಡಿದ್ದಾನೆ. ಕೂಡಲೇ ಆತನಿಗೆ ಬೈದು ಯುವತಿ ತಂದೆಗೆ ಫೋನ್ ಮಾಡಿ ಘಟನೆ ಬಗ್ಗೆ ತಿಳಿಸಿದ್ದಾಳೆ.
ಪುತ್ತೂರು ಬಸ್ ನಿಲ್ದಾಣ ಬರುತ್ತಿದ್ದಂತೆ ಆರೋಪಿ ಬಸ್ಸಿನ ಎಮರ್ಜೆನ್ಸಿ ಕಿಟಕಿಯಿಂದ ಪರಾರಿಯಾಗಲು ಯತ್ನಿಸಿದ್ದಾನೆ. ತುರ್ತು ನಿರ್ಗಮನದ ಕಿಟಕಿಯ ಮೂಲಕ ಪರಾರಿಯಾಗಲು ಆರೋಪಿ ತೌಹಿದ್ ಯತ್ನಿಸಿದ್ದಾನೆ. ಸ್ಥಳೀಯರು ಹಾಗು ವಿದ್ಯಾರ್ಥಿನಿಯ ತಂದೆ ತಕ್ಷಣ ಆರೋಪಿಯನ್ನು ಹಿಡಿದಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಆರೋಪಿ ತೌಹಿದ್ ನನ್ನು ವಶಕ್ಕೆ ಪಡೆದಿದ್ದಾರೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.