ಬೆಂಗಳೂರು : ಮಾಜಿ ಸಂಸದ ಡಿಕೆ ಸುರೇಶ್ ಎಂದು ಹೇಳಿ ಚಿನ್ನಾಭರಣ ವಂಚನೆ ಎಸಗಿದ್ದ ಐಶ್ವರ್ಯಗೌಡ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಕಾಯಿದೆಯಡಿ ED ಜಾರಿ ಮಾಡಿರುವ ಸಮನ್ಸ್ ಪ್ರಶ್ನಿಸಿ ಇದೀಗ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ಏಪ್ರಿಲ್ 24 ಮತ್ತು 25ರಂದು ತಮ್ಮ ವಿರುದ್ಧ ನಡೆಸಿರುವ ಶೋಧ ಕಾರ್ಯಾಚರಣೆ, ಜಪ್ತಿ ಹಾಗೂ ಪಿಎಂಎಲ್ಎ ಕಾಯಿದೆ ಸೆಕ್ಷನ್ 17ರ ಅಡಿ ಹೇಳಿಕೆ ದಾಖಲಿಸಿಕೊಂಡಿರುವುದು ಕಾನೂನುಬಾಹಿರ ಎಂದು ಘೋಷಿಸುವಂತೆ ಕೋರಿ ವಿನಯ್ ಕುಲಕರ್ಣಿ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಶಿವಶಂಕರ್ ಅಮರಣ್ಣವರ್ ಅವರಿದ್ದ ರಜಾಕಾಲೀನ ಏಕಸದಸ್ಯ ಪೀಠ ನಡೆಸಿತು.
ED ಪರ ವಕೀಲರು, ED ಸಮನ್ಸ್ ಪ್ರಶ್ನಿಸುವಂತಿಲ್ಲ ಎಂದು ಹೈಕೋರ್ಟ್‌ಗೆ ವಿಭಾಗೀಯ ಪೀಠ ಆದೇಶಿಸಿದೆ. ಪಿಎಂಎಲ್ಎ ಅಡಿ ತನಿಖೆ ಮುಂದುವರಿಸಲು ಮುಖ್ಯ ನ್ಯಾಯಮೂರ್ತಿಗಳ ಪೀಠವು ಸ್ವಾತಂತ್ರ್ಯ ಕಲ್ಪಿಸಿದೆ. ಹೀಗಾಗಿ, ಮಧ್ಯಂತರ ಪರಿಹಾರ ನೀಡುವುದನ್ನು ಪರಿಗಣಿಸುವುದಾದರೆ ನಮ್ಮ ವಾದವನ್ನು ಆಲಿಸಬೇಕು. ವಿನಯ್ ಪರ ವಕೀಲರು ಇಂದಿನ ತುರ್ತಿನ ಅಗತ್ಯತೆಯನ್ನು ಪೀಠಕ್ಕೆ ಮನವರಿಕೆ ಮಾಡಿಕೊಡಬೇಕಿತ್ತು. ವಿನಯ್ಗೆ ಸಮನ್ಸ್ ಜಾರಿ ಮಾಡಿದ್ದೆವು, ಅವರು ಹಾಜರಾಗಿದ್ದರು. ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ಅಲ್ಲಿಗೆ ಮುಗಿಯಿತು. ಈಗ ಮತ್ತೆ ಹೊಸದಾಗಿ ಸಮನ್ಸ್ ಜಾರಿ ಮಾಡಿಲ್ಲ ಎಂದು ಪೀಠಕ್ಕೆ ವಿವರಿಸಿದರು.
ವಿನಯ್ ಕುಲಕರ್ಣಿ ಪರ ವಕೀಲರು, ಪಿಎಂಎಲ್ಎ ಅಡಿ ಅಧಿಕಾರ ಹೊಂದಿರುವ ಅಧಿಕಾರಿ ನಮ್ಮ ಕಕ್ಷಿದಾರರಿಗೆ ಸಮನ್ಸ್ ಜಾರಿ ಮಾಡಿಲ್ಲ. ಜಪ್ತಿ ಸಂದರ್ಭದಲ್ಲಿ ವಿನಯ್ ಕುಲಕರ್ಣಿ ಅವರ ಮನೆಯಲ್ಲಿ ಇ.ಡಿ ಅಧಿಕಾರಿಗಳಿಗೆ ಏನೂ ದೊರೆತಿಲ್ಲ. ಹೀಗಿರುವಾಗ ವಿನಯ್ ಕುಲಕರ್ಣಿ ಹೇಳಿಕೆ ದಾಖಲಿಸಿಕೊಳ್ಳುವಂತಿರಲಿಲ್ಲ. ಸಮನ್ಸ್ನಲ್ಲಿ ಮೂಲ ಅಪರಾಧ (ಪ್ರೆಡಿಕೇಟ್ ಅಪರಾಧ) ಯಾವುದು ಎಂದು ಹೇಳಿಲ್ಲ. ಐಶ್ವರ್ಯಾ ಗೌಡ ರಿಮ್ಯಾಂಡ್ ಅರ್ಜಿಯಲ್ಲಿಯೂ ವಿನಯ್ ಕುಲಕರ್ಣಿ ಬಗ್ಗೆ ಯಾವುದೇ ಉಲ್ಲೇಖವಿಲ್ಲ ಎಂದರು.ಜ್ ವೇಳೆ ವಾದ ಆಲಿಸಿದ ನ್ಯಾಯಪೀಠ, ಮೇ 15ಕ್ಕೆ ಮಧ್ಯಂತರ ಕೋರಿಕೆಗೆ ಸಂಬಂಧಿಸಿದ ಆದೇಶ ಮಾಡುವುದಾಗಿ ತಿಳಿಸಿ ವಿಚಾರಣೆ ಮುಂದೂಡಿದರು.