ಚಿಕ್ಕಮಗಳೂರು : ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿಟಿ ರವಿಗೆ ಭರ್ಜರಿ ಗೆಲುವು ಸಿಕ್ಕಿದೆ. ಅಲ್ಲದೇ ಪರಿಷತ್ ಜೆಡಿಎಸ್ ಸದಸ್ಯ ಎಸ್ ಎಲ್ ಭೋಜೇಗೌಡಗು ಜಯ ಸಿಕ್ಕಿದ್ದು NDA ಮೈತ್ರಿಕೂಟದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.
32 ಮತದಾರರಿರುವ ಚಿಕ್ಕಮಗಳೂರು ತಾಲೂಕು ಸಹಕಾರ ಸಂಘಗಳ ಕ್ಷೇತ್ರವಾಗಿದೆ. ಚಿಕ್ಕಮಗಳೂರು ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕ್ಷೇತ್ರಕ್ಕೆ ಸಿ.ಟಿ. ರವಿ, ಎಸ್.ಎಲ್. ಭೋಜೇಗೌಡ ಸ್ಪರ್ಧೆ ಮಾಡಿದ್ದಾರೆ. ಈ ಇಬ್ಬರು ಮೈತ್ರಿ ಅಭ್ಯರ್ಥಿಗಳಾಗಿ ಕಣದಲ್ಲಿದ್ದಾರೆ. ಬಿಜೆಪಿ ಕಾರ್ಯಕರ್ತ ನಿರಂಜನ್ ಸ್ಪರ್ಧೆ ಮಾಡಿರುವುದು ಇವರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿತ್ತು. ಇದೀಗ ಸಿಟಿ ರವಿ ಮತ್ತು ಎಸ್ ಎಲ್ ಭೋಜೇಗೌಡ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿಟಿ ರವಿಗೆ ಭರ್ಜರಿ ಗೆಲುವು ಸಿಕ್ಕಿದೆ, ಪರಿಷತ್ ಜೆಡಿಎಸ್ ಸದಸ್ಯ ಎಸ್ ಎಲ್ ಭೋಜೇಗೌಡಗೆ ಜಯ ಸಿಕ್ಕಿದ್ದು ಮೈತ್ರಿಕೂಟದ ಕಾರ್ಯಕರ್ತರು ಸಂಭ್ರಮಿಸಿದ್ದಾರೆ








