ಬೆಂಗಳೂರು : ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆಯಾಗಿದ್ದು ಈ ಮಧ್ಯ ಅಮೇರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 2 ದೇಶಗಳು ಕದನ ವಿರಾಮ ಘೋಷಿಸದೆ ಇದ್ದರೆ ವ್ಯಾಪಾರ ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದರು. ಈ ಹಿನ್ನೆಲೆ ಭಾರತ ಮತ್ತು ಪಾಕಿಸ್ತಾನ ಕದನ ವಿರಾಮ ಘೋಷಿಸಿವೆ. ಈ ವಿಚಾರವಾಗಿ ಬೆಂಗಳೂರಲ್ಲಿ ಕಾಂಗ್ರೆಸ್ ಶಾಸಕ ಆರ್.ವಿ ದೇಶಪಾಂಡೆ ಪ್ರತಿಕ್ರಿಯ ನೀಡಿ ಈಗಿನ ಪರಿಸ್ಥಿತಿಯಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರಂತೆ ಡಿಸಿಷನ್ ಬರುವವರು ಕಷ್ಟ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಧಾನ ಮಂತ್ರಿ ಮೋದಿ ಪಾಕಿಸ್ತಾನಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ. ಯಾವುದೇ ಕಾರಣವಿಲ್ಲದೆ ಉಗ್ರ ಚಟುವಟಿಕೆಗೆ ಪಾಕಿಸ್ತಾನ್ ಪ್ರಚೋದನೆ ನೀಡುತ್ತಿದೆ. ಇದನ್ನು ಎಲ್ಲ ರಾಜಕೀಯ ಪಕ್ಷಗಳು ಗಂಭೀರವಾಗಿ ಪರಿಗಣಿಸಿವೆ. ಟ್ರಂಪ್ ಒಂದು ಹೇಳಿಕೆ ನೀಡಿ ಮಧ್ಯಸ್ಥಿಕೆ ಮಾಡಿದ್ದೇನೆ ಎಂದಿದ್ದಾರೆ. ಆದರೆ ಪ್ರಧಾನಿ ಮೋದಿ ಅವರ ಬಾಗಿಲಿಗೆ ಹೋಗಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.
ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಗಿಂತ, ನಮ್ಮ ಪ್ರಧಾನಿಗಳು ಏನು ಹೇಳುತ್ತಾರೆ ಅದನ್ನು ವಿಶ್ವಾಸದಲ್ಲಿ ಇಡಬೇಕು. ನಾನು ಎರಡು ಮೂರು ದಿನ ಯುದ್ಧದ ವಿಚಾರವನ್ನು ಗಮನಿಸಿದ್ದೇನೆ. ಆ ರೀತಿಯ ಚರ್ಚೆ ನಾನು ನೋಡಿಲ್ಲ. ಈಗಿನ ಪರಿಸ್ಥಿತಿಯಲ್ಲಿ ಇಂದಿರಾ ಗಾಂಧಿಯವರನ್ನು ಭಾರತ ಮಿಸ್ ಮಾಡುತ್ತಿರುವುದು ನಿಜ. ಇಂದಿರಾ ಗಾಂಧಿಯಂತೆ ಡಿಸಿಷನ್ ಮೇಕರ್ ಬರುವವರು ಕಷ್ಟ ಎಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕ ಆರ್ ವಿ ದೇಶಪಾಂಡೆ ಹೇಳಿಕೆ ನೀಡಿದರು.