ಯಾದಗಿರಿ : ಮನಮೋಹನ್ ಸಿಂಗ್ ಅವರು ಪ್ರಧಾನಮಂತ್ರಿಯಾಗಿದ್ದಾಗ ಕಲ್ಯಾಣ ಕರ್ನಾಟಕ ಭಾಗದಲ್ಲಿ 371 ಜೆ ವಿಧಿ ಜಾರಿ ಮಾಡಿದರು. ಈ ಭಾಗದಲ್ಲಿ 371 ಜೆ ವಿಧಿ ಜಾರಿಯಾಗಲು ಮಾಜಿ ಮುಖ್ಯಮಂತ್ರಿ ದಿ.ಎನ್. ಧರ್ಮಸಿಂಗ್ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಕಾರಣ. ಕಳೆದ ಮೂರು ವರ್ಷದಲ್ಲಿ ಕೆಕೆಆರ್ಡಿಬಿಗೆ 13000 ಕೋಟಿ ರೂಪಾಯಿ ಕೊಟ್ಟಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು.
ಇಂದು ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ಆರೋಗ್ಯ ಆವಿಷ್ಕಾರಕ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರ್ಕಾರದ ಬಳಿ ದುಡ್ಡಿಲ್ಲ ಅದಕ್ಕೆ ಅಭಿವೃದ್ಧಿ ಕೆಲಸ ನಿಂತಿದೆ ಅಂತಾರೆ, ಬಿಜೆಪಿಯವರು ಹೇಳುತ್ತಿರುವುದು ಅಪ್ಪಟ ಸುಳ್ಳು ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು.
ಗ್ಯಾರಂಟಿ ಯೋಜನೆ ಜಾರಿಗೆ ಮಾಡಿದ್ದೇವೆ ಅದರ ಜೊತೆಗೆ ಅಭಿವೃದ್ಧಿ ಕಾರ್ಯಗಳನ್ನು ಸಹ ಮಾಡುತ್ತಿದ್ದೇವೆ. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ 371 ಜೆ ವಿಧಿ ಜಾರಿ ಮಾಡಿದರು. 371 ಜೆ ಜಾರಿಯಾಗಲು ಎನ್. ಧರ್ಮಸಿಂಗ್ ಮಲ್ಲಿಕಾರ್ಜುನ ಖರ್ಗೆ ಕಾರಣ.ಕಳೆದ ಮೂರು ವರ್ಷದಲ್ಲಿ ಕೆಕೆಆರ್ಡಿಬಿಗೆ 13000 ಕೋಟಿ ರೂಪಾಯಿ ಕೊಟ್ಟಿದ್ದೇವೆ ಎಂದ್ ಆರೋಗ್ಯ ಆವಿಷ್ಕಾರ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು.