ಬೆಂಗಳೂರು : ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜೂನ್ 4ರಂದು ಕಾರ್ಯಕ್ರಮ ಹಮ್ಮಿಕೊಂಡಿರತ್ತು. ಈ ಒಂದು ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಆಗಮಿಸಿದ್ದರು. ಈ ವೇಳೆ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ್ದಾರೆ. ಈ ಒಂದು ಘಟನೆಯನ್ನು ಖಂಡಿಸಿ ಇದೇ ಜೂನ್ 16 ಮತ್ತು 17ರಂದು ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಲಿದೆ.
ಹೌದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ 11 ಜನರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ಜೂನ್ 16 ಮತ್ತು 17 ರಂದು ಪ್ರತಿಭಟನೆ ನಡೆಸಲಿದೆ. ಜೂನ್ 16 ರಂದು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಯಲಿದ್ದು, ಅದೇ ರೀತಿಯಾಗಿ ಜೂನ್ 17ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ಪ್ರತಿಭಟನೆ ನಡೆಸಲಿದೆ. ನಿನ್ನೆ ನಿಗದಿಯಾಗಿದ್ದ ಧರಣಿ, ಅಹಮದಾಬಾದ್ ವಿಮಾನ ದುರಂತದಿಂದ ಪ್ರತಿಭಟನೆ ಮುಂದೂಡಲ್ಪಟ್ಟಿತ್ತು. ಹಾಗಾಗಿ ಜೂನ್ 16 ಮತ್ತು 17 ರಂದು ಬಿಜೆಪಿ ಪ್ರತಿಭಟನೆ ನಡೆಸಲಿದೆ.








