ದಾವಣಗೆರೆ : ಬೆಂಗಳೂರಲ್ಲಿ ಬೀದಿ ನಾಯಿಗಳಿಗೆ ಬಿರಿಯಾನಿ ಹಂಚುವ ವಿಚಾರವಾಗಿ ವಿಪಕ್ಷ ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಇದು ಕೂಡ ಹಣ ಲೂಟಿ ಮಾಡುವ ಕೆಲಸವಾಗಿದೆ ಎಂದು ಕಿಡಿ ಕಾರಿದ್ದರು. ಇದೀಗ ಈ ವಿಚಾರವಾಗಿ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯೆ ನೀಡಿದ್ದು, ವಿದೇಶಗಳಿಗೆ ಹೆಚ್ಚು ಗೋಮಾಂಸ ಪೂರೈಕೆ ಮಾಡೋದು ಭಾರತ ಅದರ ಬಗ್ಗೆ ಉತ್ತರ ಪ್ರದೇಶದ ಸಿಎಂ ಅವರನ್ನೇ ಕೇಳಿ ಎಂದು ತಿರುಗೇಟು ನೀಡಿದ್ದಾರೆ.
ದಾವಣಗೆರೆಯಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯೆ ನೀಡಿದ್ದು, ಬೆಂಗಳೂರಲ್ಲಿ ಬೀದಿ ನಾಯಿಗಳಿಗೆ ಬಿರಿಯಾನಿ ಯಾರು ಹಾಕಿದ್ದಾರೆ ಗೊತ್ತಿಲ್ಲ. ಆದರೆ ಬಿರಿಯಾನಿ ಪ್ರಶ್ನೆ ಮಾಡುವ ಬಿಜೆಪಿ ನಾಯಕರನ್ನು ಕೇಳಿ ಭಾರತ ಅತಿ ಹೆಚ್ಚು ಗೋಮಾಂಸ ರಸ್ತೆ ಮಾಡುತ್ತಿದೆ. ಅದರಲ್ಲಿ ಉತ್ತರ ಪ್ರದೇಶದಲ್ಲಿ ಅತಿ ಹೆಚ್ಚು ಗೋಮಾಂಸ ಪೂರೈಕೆ ಮಾಡಲಾಗುತ್ತಿದೆ. ಗೋಮಾತೆ ಜಪ ಮಾಡುವ ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇದಕ್ಕೆ ಉತ್ತರಿಸಬೇಕು ಎಂದು ದಾವಣಗೆರೆಯಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿಕೆ ನೀಡಿದರು.