ಬೆಳಗಾವಿ : ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯ ವರದಿ ಪಡೆದು 3 ತಿಂಗಳಲ್ಲಿ ಒಳಮೀಸಲಾತಿ ಜಾರಿಗೆ ತರಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹಾದೇವಪ್ಪ ಭರವಸೆ ನೀಡಿದ್ದಾರೆ.
ಬೆಳಗಾವಿ ನಗರದ ಮಾಲಿನಿ ಸಿಟಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಸಚಿವರು, ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ಒಳಮೀಸಲಾತಿ ಜಾರಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.
ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯ ವರದಿ ಪಡೆದು 3 ತಿಂಗಳಲ್ಲಿ ಒಳಮೀಸಲಾತಿ ಜಾರಿಗೆ ತರಲಾಗುವುದು. ಒಳ ಮೀಸಲಾತಿ ಜಾರಿಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.