ಬೆಂಗಳೂರು: ಪರಿಶಿಷ್ಟ ಜಾತಿ ಮೀಸಲು ವರ್ಗೀಕರಣ ಸಂಬಂಧ ನ್ಯಾ. ಎಚ್. ಎನ್. ನಾಗಮೋಹನ್ದಾಸ್ ನೇತೃತ್ವದ ಏಕಸದಸ್ಯ ವಿಚಾರಣಾ ಆಯೋಗ ನಾಳೆ ಸಿಎಂ ಸಿದ್ದರಾಮಯ್ಯ ಅವರಿಗೆ ವರದಿ ಸಲ್ಲಿಸುವ ಸಾಧ್ಯತೆ ಇದೆ.
ಸರ್ಕಾರದ ಗಡುವಿನಂತೆ ಪರಿಶಿಷ್ಟ ಜಾತಿ ಮೀಸಲು ವರ್ಗೀಕರಣ ಸಂಬಂಧ ನ್ಯಾ.ಎಚ್.ಎನ್.ನಾಗಮೋಹನ್ ದಾಸ್ ನೇತೃತ್ವದ ಏಕಸದಸ್ಯ ವಿಚಾರಣಾ ಆಯೋಗ ಜು.31ರಂದು ಸಿಎಂ ಭೇಟಿಯಾಗಿ ವರದಿ ಸಲ್ಲಿಸುವ ಸಾಧ್ಯತೆ ಇದೆ.
ಎಸ್ಸಿ ಒಳಮೀಸಲಿಗಾಗಿ ಸರ್ಕಾರಿ ಹುದ್ದೆಗಳ ನೇಮಕ ಅಕ್ಟೋಬರ್ನಿಂದ ಸ್ಥಗಿತವಾಗಿದೆ. ಶಿಕ್ಷಣ, ಕೃಷಿ ಸೇರಿ ವಿವಿಧ ಇಲಾಖೆಗಳು ಹುದ್ದೆಗಳ ಭರ್ತಿಗೆ ಪ್ರಸ್ತಾವನೆ ಸಿದ್ಧಪಡಿಸಿದ್ದು, ಒಟ್ಟಾರೆ 60 ಸಾವಿರ ಹುದ್ದೆ ಭರ್ತಿ ನನೆಗುದಿಗೆ ಬಿದ್ದಿವೆ.