ಬೆಂಗಳೂರು : ಸೌದಿಯಲ್ಲಿ ನಡೆದ 2 ದಿನಗಳ ಕಾಲ ನಡೆದ 2025 IPL ಆಟಗಾರರ ಹರಾಜು ಪ್ರಕ್ರಿಯೆ ಮುಗಿದಿದ್ದು, ಮೊದಲನೇ ದಿನ ಕನ್ನಡಿಗ KL ರಾಹುಲ್ ಅವರನ್ನು ಕೈಬಿಟ್ಟ RCB ಮ್ಯಾನೇಜ್ಮೆಂಟ್ ವಿರುದ್ಧ ಅಭಿಮಾನಿಗಳು ಸಹಜವಾಗಿ ಅಸಮಾಧಾನಗೊಂಡಿದ್ದರು. ಬಳಿಕ ನಿನ್ನೆ ನಡೆದ ಮತ್ತೊಂದು ಹರಾಜು ಪ್ರಕ್ರಿಯೆಯಲ್ಲಿ ಹಲವು ಸ್ಟಾರ್ ಆಟಗಾರರನ್ನು ಆರ್ ಸಿ ಬಿ ಖರೀದಿಸುವ ಮೂಲಕ ಅಭಿಮಾನಿಗಳಿಗೆ ಕೊಂಚ ನಿರಾಳ ತಂದಿದೆ.
ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಒಂದು ಸ್ಟ್ರಾಂಗ್ ಟೀಮ್ ಆಗಿದ್ದು, ಈ ಒಂದು ತಂಡಕ್ಕೆ ನಾಯಕ ಯಾರು ಎನ್ನುವ ಪ್ರಶ್ನೆ ಉದ್ಭವಿಸಿದೆ. ಆರ್‌ಸಿಬಿ ಖರೀದಿಸಿರುವ ಎಲ್ಲಾ ಆಟಗಾರರಲ್ಲಿ ಒಳ್ಳೆಯ ಬ್ಯಾಟ್ಸ್ಮ ಮ್ಯಾನ್ ಮತ್ತು ಬೌಲರ್ಸ್ ಗಳಿದ್ದಾರೆ. ಆದರೆ ನಾಯಕತ್ವ ಜವಾಬ್ದಾರಿ ವಹಿಸುವ ಆಟಗಾರ ಯಾರು ಇಲ್ಲ. ಹೀಗಾಗಿ ಸಹಜವಾಗಿ ಕಿಂಗ್ ವಿರಾಟ್ ಕೊಹ್ಲಿ ಅವರೇ ಈ ಬಾರಿಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕರಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಆರ್‌ಸಿಬಿ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ವಿರಾಟ್ ಕೊಹ್ಲಿ, ಯಶ್ ದಯಾಳ್ ಹಾಗೂ ರಜತ್ ಪಾಟಿದಾರ್ ಅವರನ್ನು ಉಳಿಸಿಕೊಂಡಿತ್ತು. ಇದೀಗ ಹರಾಜಿನ ಮೂಲಕ 19 ಆಟಗಾರರನ್ನು ಆಯ್ಕೆ ಮಾಡಿಕೊಂಡಿದೆ. ಹೀಗೆ ಆರ್ಸಿಬಿಗೆ ಎಂಟ್ರಿ ಕೊಟ್ಟಿರುವ 19 ಆಟಗಾರರಲ್ಲಿ ಯಾರು ಸಹ ಯಶಸ್ವಿ ನಾಯಕರಾಗಿ ಗುರುತಿಸಿಕೊಂಡಿಲ್ಲ. ಅಂದರೆ ಯಾವುದೇ ತಂಡದ ಖಾಯಂ ನಾಯಕರಾಗಿ ಕಾಣಿಸಿಕೊಂಡಿಲ್ಲ.
ಅಲ್ಲದೆ ಆರ್‌ಸಿಬಿ ಮೂಲಗಳ ಮಾಹಿತಿ ಪ್ರಕಾರ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಈಗಾಗಲೇ ಕ್ಯಾಪ್ಟನ್ ಯಾರೆಂಬುದು ನಿರ್ಧರಿಸಿಯಾಗಿದೆ. ಅಂದರೆ ಮೆಗಾ ಹರಾಜಿಗೂ ಮುನ್ನವೇ ಐಪಿಎಲ್ ಸೀಸನ್-18 ರಲ್ಲಿ ಆರ್‌ಸಿಬಿ ತಂಡವನ್ನು ಯಾರು ಮುನ್ನಡೆಸಲಿದ್ದಾರೆ ಎಂಬುದು ನಿರ್ಧರಿತವಾಗಿದೆ.ಹೀಗಾಗಿಯೇ ಐಪಿಎಲ್ 2025 ರಲ್ಲಿ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕ್ಯಾಪ್ಟನ್ ಆಗಿ ಕಾಣಿಸಿಕೊಳ್ಳುವುದು ಖಚಿತ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.