ಬೆಂಗಳೂರು : ಆರ್ಸಿಬಿ ತಂಡವು ಅಹಮದಾಬಾದ್ನಲ್ಲಿ ನಡೆದ 18ನೇ ಆವೃತ್ತಿಯ ಐಪಿಎಲ್ ಫೈನಲ್ನಲ್ಲಿ ಚಾಂಪಿಯನ್ ಆಗುವ ಮೂಲಕ ಚೊಚ್ಚಲ ಐಪಿಎಲ್ ಟ್ರೋಫಿಗೆ ಮುತ್ತಿಕ್ಕಿತ್ತು. ಇದರ ಬೆನ್ನಲ್ಲೇ ಬೆಂಗಳೂರಿನಲ್ಲಿ ನಡೆದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಎಂ ಚಿನ್ನಸ್ವಾಮಿ ಸ್ಟೇಡಿಯಂ ಹೊರಗಡೆ ನಡೆದ ನೂಕುನುಗ್ಗಲಿನಲ್ಲಿ 11 ಮಂದಿ ಕೊನೆಯುಸಿರೆಳೆದಿದ್ದರು. ಇದರ ಬೆನ್ನಲ್ಲೇ ಆರ್ಸಿಬಿ ಮಾರಾಟದ ಸುದ್ದಿ ಕ್ರಿಕೆಟ್ ವಲಯದಲ್ಲಿ ಸಂಚಲನ ಮೂಡಿಸಿದೆ.
ಹೌದು 2025ರ ಟ್ರೋಫಿಯನ್ನ ಗೆದ್ದ ಕೇವಲ ಒಂದು ವಾರದ ನಂತರ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಫ್ರಾಂಚೈಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹೊಸ ಮಾಲೀಕರನ್ನ ಹುಡುಕುವ ಸಾಧ್ಯತೆಯಿದೆ. ಫ್ರಾಂಚೈಸಿಯ ಪ್ರಸ್ತುತ ಮಾಲೀಕರಾದ ಡಿಯಾಜಿಯೊ ಪಿಎಲ್ಸಿ ಮಾರುಕಟ್ಟೆಯಲ್ಲಿದ್ದು, ಫ್ರಾಂಚೈಸಿಯನ್ನ ಭಾಗಶಃ ಅಥವಾ ಸಂಪೂರ್ಣವಾಗಿ ಮಾರಾಟ ಮಾಡಲು ನೋಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಡಿಯಾಜಿಯೋ ತನ್ನ ಭಾರತೀಯ ಅಂಗಸಂಸ್ಥೆಯಾದ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಮೂಲಕ ಆರ್ಸಿಬಿಯ ಮಾಲೀಕತ್ವವನ್ನು ಪಡೆದುಕೊಂಡಿದೆ. ಈ ತಂಡದ ಮೌಲ್ಯವನ್ನು ಸುಮಾರು 2 ಬಿಲಿಯನ್ ಡಾಲರ್ಗೆ (ಸುಮಾರು 16,700 ಕೋಟಿ ರೂ.) ನಿರ್ಧರಿಸಲಾಗುವ ಸಾಧ್ಯತೆಯಿದೆ ಎಂದು ಬ್ಲೂಮ್ಬರ್ಗ್ ವರದಿಯೊಂದು ಉಲ್ಲೇಖಿಸಿದೆ.
ಸಾಲದ ಸುಳಿಗೆ ಸಿಲುಕಿ ಭಾರತವನ್ನೇ ತೊರೆದಿರುವ ಮದ್ಯ ಉದ್ಯಮಿ ವಿಜಯ್ ಮಲ್ಯ ಅವರ ಇತ್ತೀಚಿಗಿನ ಸಂದರ್ಶನವೊಂದ ಯೂಟ್ಯೂಬ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲವನ್ನೇ ಹುಟ್ಟುಹಾಕಿದೆ. ವಿಜಯ್ ಮಲ್ಯ ಅವರು ತಾವು ಭಾರತದಲ್ಲಿ ಮಾಡಿರುವ ಸಾಲ 6203 ಕೋಟಿ ರುಪಾಯಿ ಎಂದು ಹೇಳಿಕೊಂಡಿದ್ದಾರೆ. ಆದರೆ ಸರ್ಕಾರ, ಮಲ್ಯ ಮಾಡಿರುವ ಸಾಲ 9 ಸಾವಿರ ಕೋಟಿ ರುಪಾಯಿ ಎಂದು ಹೇಳಿಕೊಂಡಿದೆ.
ವಿಜಯ್ ಮಲ್ಯ ಭಾರತದಿಂದ ಪಲಾಯನಗೊಂಡ ಬೆನ್ನಲ್ಲೇ ಮಲ್ಯ ಅವರ ಸುಮಾರು 14 ಸಾವಿರ ಕೋಟಿ ರುಪಾಯಿ ಮೌಲ್ಯದ ಆಸ್ತಿಯನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಂಡಿದೆ. ಇದೆಲ್ಲದರ ಹೊರತಾಗಿಯೂ ವಿಜಯ್ ಮಲ್ಯ, ವಿದೇಶದಲ್ಲಿ ಸಾಕಷ್ಟು ಆಸ್ತಿ ಹಾಗೂ ಸಂಪತ್ತು ಹೊಂದಿದ್ದಾರೆ. ಹೀಗಾಗಿ ಒಂದು ವೇಳೆ ಆರ್ಸಿಬಿಯನ್ನು ಡಿಯಾಜಿಯೋ ಮಾರಾಟ ಮಾಡಲು ಮುಂದಾದರೇ, ವಿಜಯ್ ಮಲ್ಯ ಮತ್ತೆ ಆರ್ಸಿಬಿಯ ಮೇಲೆ ಹಿಡಿತ ಸಾಧಿಸುತ್ತಾರೆಯೇ ಎನ್ನುವುದನ್ನು ಕಾದು ನೋಡಬೇಕಿದೆ.
🚨 NEW RCB OWNERS EXPECTED. 🚨
– Current RCB owner Diageo Plc exploring possibilities for a potential sale of RCB, valued at up to $2 billion. (Bloomberg). pic.twitter.com/auOSki08UV
— Mufaddal Vohra (@mufaddal_vohra) June 10, 2025