ವಿಜಯನಗರ : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದಾಗಿನಿಂದಲೂ ಮುಖ್ಯಮಂತ್ರಿ ಸ್ಥಾನ ಆಗ ಬದಲಾಗುತ್ತೆ ಈಗ ಬದಲಾಗುತ್ತೆ ಅಂತ ಹೇಳ್ತ ಎರಡುವರೆ ವರ್ಷ ಕಳೆಯಿತು. ಇದೀಗ ನವೆಂಬರ್ ನಲ್ಲಿ ಸಿಎಂ ಬದ್ಲಾಗುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಹೇಳಿಕೆ ನೀಡಿದ್ದಾರೆ. ಈ ವಿಚಾರವಾಗಿ ಸಚಿವ ಸತೀಶ್ ಜಾರಕಿಹೊಳಿ, ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳದೆ ಕಷ್ಟ ಆಗಿದೆ. ಸಿಎಂ ಬದಲಾವಣೆ ಅಂದ್ರೆ ಏನು ಹೇಳಬೇಕು ಎಂದು ಹೇಳಿಕೆ ನೀಡಿದ್ದಾರೆ.
ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮ್ಮ ಸಚಿವ ಸ್ಥಾನವನ್ನೇ ಉಳಿಸಿಕೊಳ್ಳುವುದು ಕಷ್ಟ ಆಗಿದೆ. ಸಿಎಂ ಬದಲಾವಣೆ ಆಗುತ್ತಾರೆ ಅಂದರೆ ನಾವೇನು ಹೇಳೋದು? ಸಿಎಂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಮುಗಿದ ಅಧ್ಯಾಯವಾಗಿದೆ. ಸಂಪುಟ ವಿಸ್ತರಣೆ ಕುರಿತಂತೆ ಹೈಕಮಾಂಡ್ ತೀರ್ಮಾನಿಸುತ್ತೆ ಎಂದು ಹೇಳಿಕೆ ನೀಡಿದರು.