ಬೆಂಗಳೂರು : ರಾಜ್ಯಪಠ್ಯಕ್ರಮದ ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ರಾಜ್ಯ ಪಠ್ಯಕ್ರಮ ಹಾಗೂ ಪಠ್ಯಪುಸ್ತಕಗಳನ್ನು ಕಡ್ಡಾಯವಾಗಿ ಅನುಸರಿಸುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.
ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖ(1) ರಂತೆ ರಾಜ್ಯ ಸರ್ಕಾರವು ಶಿಕ್ಷಣ ಸಂಸ್ಥೆಗಳ ಸಂಬಂಧದಲ್ಲಿ ಪಾಠಕ್ರಮ, ಪಠ್ಯವಸ್ತು ಹಾಗೂ ಪಠ್ಯಪುಸ್ತಕಗಳನ್ನು ನಿಗದಿಪಡಿಸಬಹುದಾಗಿರುತ್ತದೆ. Karnataka Educational Institutions (classification, Regulation and Prescription of Curricula etc Rules-1995ರ ನಿಯಮ-19. ರ ಉಪನಿಯಮ-3 ರಂತೆ ರಾಜ್ಯಪಠ್ಯ ಕ್ರಮವನ್ನು ಅನುಸರಿಸುತ್ತಿರುವ ಎಲಾ ಶಿಕ್ಷಣ ಸಂಸ್ಥೆಗಳು ರಾಜ್ಯ ಸರ್ಕಾರದ ಸಕ್ಷಮ ಪ್ರಾಧಿಕಾರವು ನಿಗದಿಪಡಿಸುವ ಪಠ್ಯಕ್ರಮ ಮತ್ತು ಪಠ್ಯಪುಸ್ತಕಗಳನ್ನೇ ಕಡ್ಡಾಯವಾಗಿ ಅನುಸರಿಸುವುದು ಮತ್ತು ಹೆಚ್ಚುವರಿಯಾಗಿ ಯಾವುದೇ ಇತರೆ ಪಠ್ಯಕ್ರಮ ಅಥವಾ ಪಠ್ಯಪುಸ್ತಕಗಳನ್ನು ಅನುಸರಿಸುವಂತಿಲ್ಲ ಎಂದು ಸ್ಪಷ್ಟವಾಗಿ ತಿಳಿಸಲಾಗಿರುತ್ತದೆ.
ಅದರಂತೆ ಕರ್ನಾಟಕ ಶಿಕ್ಷಣ ಕಾಯ್ದೆ-1983ರ ಸೆಕ್ಷನ್-36ರಂತೆ ರಾಜ್ಯ ಪಠ್ಯಕ್ರಮದ ಶಾಲೆಗಳಿಗೆ ಮಾನ್ಯತೆ/ಮಾನ್ಯತೆ ನವೀಕರಣ ನೀಡುವಾಗ ಮಾನ್ಯತೆ ಪ್ರಮಾಣ ಪತ್ರದಲ್ಲಿ ‘ಶಾಲೆಯು ಸಂಯೋಜಿತವಾಗಿರುವ ಶಾಲೆಯು ಸಂಯೋಜಿತವಾಗಿರುವ ಶೈಕ್ಷಣಿಕ ರಾಜ್ಯ ಪಠ್ಯಕ್ರಮ ಹಾಗೂ ರಾಜ್ಯ ಪಠ್ಯಪುಸ್ತಕಗಳನ್ನು ಅನುಸರಿಸುವುದು” ಎಂದು ಷರತ್ತು ವಿಧಿಸಲಾಗಿರುತ್ತದೆ.
ಮುಂದುವರೆದು 2010-11ನೇ ಸಾಲಿನಿಂದ ರಾಜ್ಯ ಪಠ್ಯಕ್ರಮದಂತೆ ಪಠ್ಯಪುಸ್ತಕಗಳ ರಚನೆ. ಉತ್ಪಾದನೆ ಮತ್ತು ವಿತರಣೆಗೆ ಸಂಬಂಧಿಸಿದ ಸಂಪೂರ್ಣ ಕಾರ್ಯವನ್ನು ಕರ್ನಾಟಕ ಪಠ್ಯಪುಸ್ತಕ ಸಂಘ (ರಿ) ಇವರು ನಿರ್ವಹಿಸಲು ಸರ್ಕಾರವು ಆದೇಶಿಸಿರುತ್ತದೆ.
ಮೇಲ್ಕಂಡ ಅಂಶಗಳ ಹಿನ್ನೆಲೆಯಲ್ಲಿ, ಇಲಾಖಾ ಅನುಮತಿಯೊಂದಿಗೆ ರಾಜ್ಯದಲ್ಲಿ ನಡೆಯುತ್ತಿರುವ ರಾಜ್ಯ ಪಠ್ಯಕ್ರಮದ ಎಲ್ಲಾ ಖಾಸಗಿ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳು 1 ರಿಂದ 10ನೇ ತರಗತಿಯ SATS ಲ್ಲಿರುವ ವಿದ್ಯಾರ್ಥಿಗಳ ದಾಖಲಾತಿಯಂತೆ ತಂತ್ರಾಂಶದ ಮೂಲಕ ಬೇಡಿಕೆಯನ್ನು ದಾಖಲಿಸುವುದು. ಖಾಸಗಿ ಅನುದಾನರಹಿತ ಶಾಲೆಗಳು ವಿದ್ಯಾರ್ಥಿಗಳ ಸಂಖ್ಯೆಗನುಗುಣವಾಗಿ ಪಠ್ಯಪುಸ್ತಕಗಳನ್ನು ಖರೀದಿಸಿ ರಾಜ್ಯ ಪಠ್ಯಪುಸ್ತಕಗಳನ್ನೇ ಅನುಸರಿಸಲು ತಮ್ಮ ವ್ಯಾಪ್ತಿಯ ಎಲ್ಲಾ ಖಾಸಗಿ ಶಾಲಾ ಆಡಳಿತ ಮಂಡಳಿಗಳಿಗೆ ಸೂಚನೆ ನೀಡಲು ತಿಳಿಸಿದೆ. ಹಾಗೂ ಉಲ್ಲೇಖ-3 ರಂತೆ ಇತರೆ ಪಠ್ಯಕ್ರಮ ಅನುಸರಿಸುವ ಶಾಲೆಗಳು ಕನ್ನಡ ಭಾಷಾ ಪಠ್ಯಪುಸ್ತಕಗಳ ಬೇಡಿಕೆ ದಾಖಲಿಸಿ ಖರೀದಿಸಿ ಅನುಸರಿಸುವಂತೆ ತಮ್ಮ ವ್ಯಾಪ್ತಿಯ ಎಲ್ಲಾ, ಖಾಸಗಿ ಶಾಲಾ ಆಡಳಿತ ಮಂಡಳಿಗಳಿಗೆ ಸೂಚನೆ ನೀಡಲು ತಿಳಿಸಿದೆ.
ಯಾವುದೇ ರಾಜ್ಯ ಪಠ್ಯಕ್ರಮದ ಖಾಸಗಿ ಶಾಲೆಯು ಸದರಿ ಷರತ್ತನ್ನು ಉಲ್ಲಂಘಿಸಿದಲ್ಲಿ ಅಂತಹ ಶಾಲೆಯ ವಿರುದ್ಧ ನಿಯಮಾನುಸಾರ ಕ್ರಮ ವಹಿಸಲು ತಿಳಿಸಿದೆ.