ಬೆಂಗಳೂರು: ರಾಜ್ಯದ ಸರ್ಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಂತ ಅಧಿಕಾರಿ, ನೌಕರರು ಕಚೇರಿಯ ವೇಳೆಯಲ್ಲಿ ಈ ಮುಖ್ಯ ಸೂಚನೆಗಳನ್ನು ಪಾಲನೆ ಮಾಡಬೇಕು ಎಂಬುದಾಗಿ ಸರ್ಕಾರ ಖಡಕ್ ಆದೇಶ ಮಾಡಿದೆ.
ಈ ಸಂಬಂಧ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಆದೇಶ ಹೊರಡಿಸಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿಗಳು ಸಮಯ ಪಾಲನ ಮಾಡದಿರುವುದು, ಚಲನ-ವಲನ ವಹಿಯನ್ನು ನಿರ್ವಹಿಸದಿರುವುದು, ಕರ್ತವ್ಯದ ಅವಧಿಯಲ್ಲಿ ಗುರುತಿನ ಚೀಟಿಯನ್ನು ಧರಿಸದಿರುವುದು, ಅಧಿಕಾರಿ/ಸಿಬ್ಬಂದಿಗಳ ಹೆಸರು ಮತ್ತು ಹುದ್ದೆಯ ನಾಮ ಫಲಕಗಳನ್ನು ಅಳವಡಿಸದಿರುವ ಬಗ್ಗೆ ದೂರುಗಳು ಸ್ವೀಕೃತವಾಗಿರುವುದರಿಂದ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಈ ಕಳಕಂಡ ಸೂಚನಗಳನ್ನು ಪಾಲಿಸಲು ಸೂಚಿಸಿದ್ದಾರೆ.
1. ನಿಯಮಗಳ ಪುಕಾರ ಕಛೇರಿಗೆ ಬರುವ ವೇಳೆ ಹಾಗೂ ಕಛೇರಿಯಿಂದ ಹೊರಡುವ ವೇಳೆಯನ್ನು ಪಾಲನೆ ಮಾಡುವುದು.
2. ಕಛೇರಿ ಅವಧಿ ಪೂರ್ಣವಾಗುವವರೆಗೆ ತಮಗೆ ನಿಗದಿಪಡಿಸಿದ ಸ್ಥಾನದಲ್ಲಿ ಇದ್ದು ಕರ್ತವ್ಯ ನಿರ್ವಹಿಸತಕ್ಕದ್ದು.
3. ಕಛೇರಿ ಸಮಯದಲ್ಲಿ ನೌಕರರು/ಅಧಿಕಾರಿಗಳು ಕಛೇರಿ ಕೆಲಸದ ನಿಮಿತ್ತ ತೆರಳಬೇಕಾಗಿದ್ದಲ್ಲಿ, ನಮೂದಿಸಿ, ಮೇಲಾಧಿಕಾರಿಗಳ ವಹಿಯಲ್ಲಿ ಸಕಾರಣವನ್ನು ಚಲನ-ವಲನ ಪೂರ್ವಾನುಮತಿಯನ್ನು ಪಡೆಯತಕ್ಕದ್ದು.
4. ಕರ್ತವ್ಯದ ಅವಧಿಯಲ್ಲಿ ಅಧಿಕಾರಿಗಳು/ಸಿಬ್ಬಂದಿಗಳು ಕಡ್ಡಾಯವಾಗಿ ಇಲಾಖೆಯಿಂದ ಪಡೆದ ಗುರುತಿನ ಚೀಟಿಯನ್ನು ಕೊರಳಿಗೆ ಧರಿಸುವುದು.
5. ಕಛೇರಿಗಳಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿ/ ಅಧಿಕಾರಿಗಳು ತಾವು ಕುಳಿತು ಕರ್ತವ್ಯ ನಿರ್ವಹಿಸುವ ಮೇಜಿನ ಮೇಲೆ ಅಧಿಕಾರಿ/ ಸಿಬ್ಬಂದಿಗಳು ಹೆಸರು ಮತ್ತು ಹುದ್ದೆ ಸೂಚಿಸುವ ನಾಮ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳತಕ್ಕದ್ದು.
6. ಹಿರಿಯ ನಾಗರಿಕರು, ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ ಅವರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವುದು.
7. ಯಾವುದೇ ರೀತಿಯ ಪತ್ರಗಳು ಬಂದಾಗ ಕಛೇರಿ ಕೈಪಿಡಿಯನ್ವಯ ಕಾರ್ಯ ನಿರ್ವಹಿಸುವುದು.
8. ಕಡತಗಳ ಚಲನವಲನಗಳ ಬಗ್ಗೆ ನಿಗಾವಹಿಸುವುದು.
9. ಇ-ಆಫೀಸ್ ಲಭ್ಯವಿರುವ ಕಡೆ ಕಡತ/ಸ್ವೀಕೃತಿಪತ್ರ ಪರಿಶೀಲಿಸಿ ತುರ್ತಾಗಿ ನಿಯಮಗಳನ್ವಯ ವಿಲೇವಾರಿ ಮಾಡುವುದು.
10. ಈ ಮೇಲಿನ ನಿಯಮಗಳನ್ನು ಪಾಲಿಸದಿದ್ದಲ್ಲಿ CCA ನಿಯಮಾನುಸಾರ ಶಿಸ್ತುಕ್ರಮ ಕೈಗೊಳ್ಳಲಾಗುವುದು.
ಟ್ರಂಪ್ ಅಧಿಕಾರ ಸ್ವೀಕರಿಸಿದ ಬಳಿಕ ಅಮೆರಿಕಾದಿಂದ 500ಕ್ಕೂ ಹೆಚ್ಚು ‘ಅಕ್ರಮ ವಲಸಿಗರ’ ಬಂಧನ