Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೊಬೈಲ್ ಬಳಕೆದಾರರೇ ಗಮನಿಸಿ : ನಿಮ್ಮ ಹೆಸರಿನಲ್ಲಿ `ನಕಲಿ ಸಿಮ್ ಕಾರ್ಡ್’ ಇದ್ರೆ ಜಸ್ಟ್ ಒಂದೇ ನಿಮಿಷದಲ್ಲಿ ಬ್ಲಾಕ್ ಮಾಡಿ.!

20/12/2025 1:58 PM

ರಾಜ್ಯದ ಜನರೇ ಗಮನಿಸಿ : ನಿಮ್ಮ ಜಿಲ್ಲೆಯಲ್ಲಿ ವಿದ್ಯುತ್ ಸಮಸ್ಯೆಗಳಿದ್ರೆ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ.!

20/12/2025 1:47 PM

ಫೋನ್ ಮತ್ತು ವ್ಯಾಲೆಟ್ ಒಟ್ಟಿಗೆ ಕಳೆದು ಕೊಂಡಿದ್ದೀರಾ? ನಿಮ್ಮ ಹಣವನ್ನು ವೇಗವಾಗಿ ರಕ್ಷಿಸಲು ಹಂತ ಹಂತದ ಮಾಹಿತಿ ಇಲ್ಲಿದೆ

20/12/2025 1:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಶಾಲಾ-ಕಾಲೇಜು ಆವರಣದಲ್ಲಿ `ತಂಬಾಕು’ ಸೇವನೆಯ ದುಷ್ಪರಿಣಾಮಗಳ ಫಲಕ ಅಳವಡಿಕೆ ಕಡ್ಡಾಯ : ರಾಜ್ಯ ಸರ್ಕಾರದಿಂದ ಮಹತ್ವದ ಸೂಚನೆ
KARNATAKA

BIG NEWS : ಶಾಲಾ-ಕಾಲೇಜು ಆವರಣದಲ್ಲಿ `ತಂಬಾಕು’ ಸೇವನೆಯ ದುಷ್ಪರಿಣಾಮಗಳ ಫಲಕ ಅಳವಡಿಕೆ ಕಡ್ಡಾಯ : ರಾಜ್ಯ ಸರ್ಕಾರದಿಂದ ಮಹತ್ವದ ಸೂಚನೆ

By kannadanewsnow5709/10/2024 1:25 PM

ಬೆಂಗಳೂರು : ಶಾಲಾ-ಕಾಲೇಜುಗಳ ಆವರಣಗಳಲ್ಲಿ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. ಶಾಲೆಗಳಿಂದ 100 ಮೀಟರ್ ಅಂತರದಲ್ಲಿ ಯಾವುದೇ ರೀತಿಯ ತಂಬಾಕು ಪ್ರದೇಶಗಳು ಕಂಡುಬರದಂತೆ ಕ್ರಮ ಕೈಗೊಳ್ಳಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ‌ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಪ್ರಗತಿ ಪರಿಶೀಲನಾ ಸಭೆ, ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ‘ತಂಬಾಕು ಮುಕ್ತ ಯುವ ಅಭಿಯಾನ 2.0’ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಯಶಸ್ವಿಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು.2024 ಏಪ್ರಿಲ್ ಮಾಹೆಯಿಂದ ಸೆಪ್ಟೆಂಬರ್ ಮಾಯೆಯ ವರೆಗೆ ಜಿಲ್ಲೆಯಲ್ಲಿ ತಂಬಾಕು ತ್ಯಜಿಸಿದ ರೋಗಿಗಳ ಸಂಖ್ಯೆ 265 ಆಗಿದೆ. ಇದೇ ರೀತಿಯಾಗಿ ಇನ್ನು ಹೆಚ್ಚಿನ ಮಟ್ಟದಲ್ಲಿ ತಂಬಾಕನ್ನು ನಿಯಂತ್ರಿಸಲು ಜಿಲ್ಲಾ ಹಾಗೂ ತಾಲ್ಲೂಕು ಮತ್ತು ಸ್ಥಳೀಯ ಮಟ್ಟದ ಅಧಿಕಾರಿಗಳೊಂದಿಗೆ ಸಮನ್ವಯದಿಂದ ಕಾರ್ಯ ಪ್ರವೃತ್ತರಾಗಿ ತಂಬಾಕು ನಿಯಂತ್ರಣಕ್ಕೆ ಕ್ರಮವಹಿಸಲು ತಿಳಿಸಿದರು.

ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳು ಹಾಗೂ ತಂಬಾಕು ನಿಯಂತ್ರಣ ಕಾನೂನು ಕೊಟ್ಪಾ 2003ರ ಕಾಯ್ದೆ:-

ಬಗ್ಗೆ ಶಾಲಾ ಮಕ್ಕಳಲ್ಲಿ ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸಿ. ಸಾರ್ವಜನಿಕ ಸ್ಥಳಗಳಲ್ಲಿ, ಶಾಲಾ ಕಾಲೇಜುಗಳಲ್ಲಿ, ಅಂಗಡಿಗಳಲ್ಲಿ ಕೈಗಾರಿಕೆಗಳಲ್ಲಿ ತಂಬಾಕು ಸೇವನೆ ನಿಷೇಧ ಬಗೆಗಿನ ನಾಮಫಲಕಗಳನ್ನು ಪ್ರದರ್ಶಿಸುತ್ತಿದ್ದಾರೆ ಎಂಬುದನ್ನು ಪರಿಶೀಲಿಸಿ ಯಾರು ಪ್ರದರ್ಶಿಸುತ್ತಿಲ್ಲ ಅಂತವರ ವಿರುದ್ಧ ಕ್ರಮ ಕೈಗೊಳ್ಳಬೇಕು , ತಂಬಾಕು ವ್ಯಸನೆಯಿಂದ ಆರೋಗ್ಯ ಮೇಲೆ ಆಗುವ ದುಷ್ಪರಿಣಾಮಗಳ ಬಗ್ಗೆ ಕಾಲ ಕಾಲಕ್ಕೆ ಸಾರ್ವಜನಿಕರಿಗೆ ಅರಿವು ಮೂಡಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ತಂಬಾಕು ನಿಯಂತ್ರಣ ಕಾನೂನು

ಕೊಟ್ಪಾ 2003ರ ಕಾಯ್ದೆಯಂತೆ ಸೆಕ್ಷನ್ 04 ರ ಅಡಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ನಿಷೇಧಿಸಲಾಗಿದೆ. ಇದರನ್ವಯ ಸಾರ್ವಜನಿಕ ಸ್ಥಳಗಳಲ್ಲಿ ಮಾಲೀಕರು ನಾಮಫಲಕಗಳನ್ನು ಪ್ರದರ್ಶಿಸಬೇಕು. ಸೆಕ್ಷನ್ 05 ರ ಅಡಿಯಲ್ಲಿ ತಂಬಾಕು ಉತ್ಪನ್ನಗಳ ನೇರ ಹಾಗೂ ಪರೋಕ್ಷ ಜಾಹೀರಾತು ಉತ್ತೇಜನ, ಪ್ರಾಯೋಜಕತೆ ನಿಷೇಧ ಮಾಡಲಾಗಿದೆ. ಇದರ ಅನ್ವಯ ತಂಬಾಕು ಉತ್ಪನ್ನಗಳ ಮಾರಾಟ ಮಾಡುವ ಅಂಗಡಿಗಳಲ್ಲಿ ತಂಬಾಕು ಜಾಹೀರಾತುಗಳನ್ನು ಬೋರ್ಡ್, ಭಿತ್ತಿ ಪತ್ರ, ಎಲ್ ಸಿ ಡಿ ಟಿವಿಗಳ ಮೂಲಕ ಪ್ರಚಾರ ಮಾಡುವಂತಿಲ್ಲ, ದೃಶ್ಯ ಹಾಗೂ ಮುದ್ರಣ ಮಾಧ್ಯಮದ ಮೂಲಕ ತಂಬಾಕು ಉತ್ಪನ್ನಗಳ ಜಾಹೀರಾತು ಮಾಡುವಂತಿಲ್ಲ. ಸೆಕ್ಷನ್ 6 ರ ಅಡಿಯಲ್ಲಿ ತಂಬಾಕು ಉತ್ಪನ್ನಗಳನ್ನು 18 ವರ್ಷದೊಳಗಿನ ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಮಾರಾಟ ಮಾಡುವಂತಿಲ್ಲ. ಈ ಕಾನೂನುಗಳನ್ನು ಉಲ್ಲಂಘಿಸಿದಲ್ಲಿ ದಂಡ ಹಾಗೂ ಸೂಕ್ತ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ. ಸೆಕ್ಷನ್ 06 ಬಿ ಅಡಿಯಲ್ಲಿ ಶಿಕ್ಷಣ ಸಂಸ್ಥೆಗಳ ನೂರು ಅಡಿಯ ಒಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧ. ಸೆಕ್ಷನ್ 07 ರಲ್ಲಿ ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಮೇಲೆ ಶೇ. 85 ರಷ್ಟು ನಿರ್ದಿಷ್ಟ ಆರೋಗ್ಯ ಎಚ್ಚರಿಕೆಗಳ ಸಂದೇಶಗಳಿಲ್ಲದೆ ಮಾರಾಟ ಮಾಡುವಂತಿಲ್ಲ ಎಂದು ಹೇಳಿದರು.

ತಂಬಾಕು ವ್ಯಸನಿಗಳನ್ನು ಹೆಚ್ಚು ಪತ್ತೆ ಮಾಡಿ ಸಮಾಲೋಚನೆ ನಡೆಸಿ, ತಂಬಾಕು ವ್ಯಸನ ಮುಕ್ತರನ್ನಾಗಿ ಮಾಡಲು ಅಗತ್ಯ ಕ್ರಮ ಕೈಗೊಳ್ಳಿ ಎಂದರಲ್ಲದೆ, ಕಾನೂನು ಪಾಲಿಸದೆ ತಂಬಾಕು ವಸ್ತುಗಳನ್ನು ಮಾರಾಟ ಮಾಡುವ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿ ಅಂತವರಿಗೆ ಎಚ್ಚರಿಕೆ ನೀಡಿ, ಅಗತ್ಯವಿದ್ದಲ್ಲಿ ಪ್ರಕರಣ ದಾಖಲಿಸಿ ಎಂದು ಹೇಳಿದರು.

ಶಿಕ್ಷಣ ಇಲಾಖೆ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಪೋಲಿಸ್ ಇಲಾಖೆ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಿ ಕಾರ್ಯಕ್ರಮ ಯಶಸ್ವಿಯಾಗಲು ಶ್ರಮಿಸಬೇಕು ಎಂದರು.

ಸ್ಟಾಪ್ ಟ್ಯೊಬ್ಯಾಕೋ ಮೊಬೈಲ್ ಆಪ್ ಬಳಸಿ:-

ತಂಬಾಕು ನಿಯಂತ್ರಿಸಲು ರೂಪುಗೊಂಡಿರುವ ಸ್ಟಾಪ್ ಟ್ಯೊಬ್ಯಾಕೋ ಆಪ್ ಅನ್ನು ಅಧಿಕಾರಿಗಳು ಸೇರಿದಂತೆ ಸಾರ್ವಜನಿಕರು ಸಹ ಬಳಸಬಹುದಾಗಿದೆ. ಕಾನೂನು ಬಾಹಿರವಾಗಿ ತಂಬಾಕು ಮಾರಾಟ ಮಾಡುತ್ತಿರುವ ಪ್ರದೇಶದ ಕುರಿತು ಈ ಆಪ್ ಮೂಲಕ ಸಾರ್ವಜನಿಕರು ಮಾಹಿತಿ ನೀಡಬಹುದಾಗಿದೆ. ಮಾಹಿತಿ ನೀಡಿದ ಸಾರ್ವಜನಿಕರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು. ತಂಬಾಕು ಬಳಕೆಯನ್ನು ನಿಯಂತ್ರಿಸಲು ಸಾರ್ವಜನಿಕರು ಸಹ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

ಗರ್ಭಿಣಿಯರು, ಮಕ್ಕಳು ಲಸಿಕೆ ಪಡೆಯಿರಿ:-
5 ವರ್ಷದ ಒಳಗಿನ ಮಕ್ಕಳು, ಗರ್ಭಿಣಿಯರು ತಪ್ಪದೇ ನಿಗದಿತ ಸಮಯಕ್ಕೆ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಡಾಕ್ಟರ್ ಗಳ ಸಲಹೆಯಂತೆ ಲಸಿಕೆಗಳನ್ನು ಹಾಕಿಸಿ ಕೊಳ್ಳಬೇಕು. ಗರ್ಭಿಣಿಯರಿಗೆ ಹಾಗೂ ಮಕ್ಕಳಿಗೆ ಯಾವ ಹಂತದಲ್ಲಿ ಯಾವ ಲಸಿಕೆ ಹಾಕಿಸಬೇಕು ಎಂಬ ಮಾಹಿತಿ ವೈದ್ಯಾಧಿಕಾರಿಗಳಿಂದ ಪಡೆದು ಸರಿಯಾದ ಸಮಯಕ್ಕೆ ಲಸಿಕೆ ಹಾಕಿಸಿಕೊಳ್ಳಬೇಕು. ಇದರಿಂದ ವಿವಿಧ ಖಾಯಿಲೆಗಳು ಬರುವುದನ್ನು, ಸಾವು-ನೋವನ್ನು ತಪ್ಪಿಸಬಹುದು. ಇದುವರೆಗೂ ಲಸಿಕೆ ಪಡೆಯದ, ಲಸಿಕೆ ಪಡೆಯಲು ಬಾಕಿ ಇರುವಂತಹ ಮಕ್ಕಳು ಮತ್ತು ಗರ್ಭಿಣಿಯರ ಮಾಹಿತಿ ಕಲೆ ಹಾಕಿ ಲಸಿಕೆ ಹಾಕಿಸಿ, ವಲಸಿಗರು ವಾಸವಿರುವ ಪ್ರದೇಶ, ನಗರದ ಸ್ಲಂ ಪ್ರದೇಶದಲ್ಲಿ ಹೆಚ್ಚು ಗಮನ ಹರಿಸಿ ಮಕ್ಕಳಿಗೆ, ಗರ್ಭಿಣಿಯರಿಗೆ ಲಸಿಕೆ ಹಾಕಿಸುವ ಮೂಲಕ ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಿ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಗರ್ಭಿಣಿಯರು ಹಾಗೂ ಮಕ್ಕಳ ಸಾವು ಸಂಭವಿಸುವುದನ್ನು ತಡೆಗಟ್ಟಲು ಜಿಲ್ಲೆಯ ಎಲ್ಲಾ ವೈದ್ಯಾಧಿಕಾರಿಗಳಿಗೆ, ಶುಷ್ರೂಶಕಿಯರಿಗೆ, ಇತರೆ ಸಿಬ್ಬಂದಿಗೆ ಕಾಲಕಾಲಕ್ಕೆ ತರಬೇತಿ, ಮಾರ್ಗದರ್ಶನ ನೀಡಿ. ಗರ್ಭಿಣಿಯರು ಸರ್ಕಾರಿ ಆಸ್ಪತ್ರೆಗಳಲ್ಲಿ ನೋಂದಣಿಯಾಗಿ ಹೆರಿಗೆಯಾಗುವ ತನಕ ಅವರ ಆರೋಗ್ಯ ಸ್ಥಿತಿ ಗತಿ ಬಗ್ಗೆ ಗಮನ ಹರಿಸುವುದು ಆರೋಗ್ಯಾಧಿಕಾರಿಗಳ ಜವಾಬ್ದಾರಿ ಆಗಿರುತ್ತದೆ, ಹಾಗೇಯೇ ಹುಟ್ಟಿದ ಮಗುವಿನಿಂದ 5 ವರ್ಷದ ತನಕ ಮಗುವಿನ ಆರೋಗ್ಯ ಕಾಳಜಿ ಬಗ್ಗೆಯು ಗಮನಹರಿಸಬೇಕು. ಆರೋಗ್ಯದಲ್ಲಿ ಏರುಪೇರು ಕಂಡುಬಂದಿಲ್ಲ ತತ್ಕ್ಷಣ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಆರೋಗ್ಯಾಧಿಕಾರಿಗಳಿಗೆ ಮಾಹಿತಿ ಇದ್ದರೆ ಸಾಕಷ್ಟು ಸಾವು-ನೋವು ತಪ್ಪಿಸಬಹುದು. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಆರೋಗ್ಯಾಧಿಕಾರಿಗಳು ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಿ. ಕರ್ತವ್ಯ ಲೋಪ ಅಥವಾ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.

BIG NEWS : ಶಾಲಾ-ಕಾಲೇಜು ಆವರಣದಲ್ಲಿ `ತಂಬಾಕು' ಸೇವನೆಯ ದುಷ್ಪರಿಣಾಮಗಳ ಫಲಕ ಅಳವಡಿಕೆ ಕಡ್ಡಾಯ : ರಾಜ್ಯ ಸರ್ಕಾರದಿಂದ ಮಹತ್ವದ ಸೂಚನೆ BIG NEWS: It is mandatory to install boards on ill-effects of tobacco consumption in schools colleges: State govt
Share. Facebook Twitter LinkedIn WhatsApp Email

Related Posts

ಮೊಬೈಲ್ ಬಳಕೆದಾರರೇ ಗಮನಿಸಿ : ನಿಮ್ಮ ಹೆಸರಿನಲ್ಲಿ `ನಕಲಿ ಸಿಮ್ ಕಾರ್ಡ್’ ಇದ್ರೆ ಜಸ್ಟ್ ಒಂದೇ ನಿಮಿಷದಲ್ಲಿ ಬ್ಲಾಕ್ ಮಾಡಿ.!

20/12/2025 1:58 PM1 Min Read

ರಾಜ್ಯದ ಜನರೇ ಗಮನಿಸಿ : ನಿಮ್ಮ ಜಿಲ್ಲೆಯಲ್ಲಿ ವಿದ್ಯುತ್ ಸಮಸ್ಯೆಗಳಿದ್ರೆ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ.!

20/12/2025 1:47 PM1 Min Read

BREAKING : ಕಾನೂನು ಸಚಿವ ಹೆಚ್ ಕೆ ಪಾಟೀಲ್ ಗೆ ಜೀವ ಬೆದರಿಕೆ ಹಾಕಿದ್ದ ಆರೋಪಿ ಅರೆಸ್ಟ್

20/12/2025 1:37 PM1 Min Read
Recent News

ಮೊಬೈಲ್ ಬಳಕೆದಾರರೇ ಗಮನಿಸಿ : ನಿಮ್ಮ ಹೆಸರಿನಲ್ಲಿ `ನಕಲಿ ಸಿಮ್ ಕಾರ್ಡ್’ ಇದ್ರೆ ಜಸ್ಟ್ ಒಂದೇ ನಿಮಿಷದಲ್ಲಿ ಬ್ಲಾಕ್ ಮಾಡಿ.!

20/12/2025 1:58 PM

ರಾಜ್ಯದ ಜನರೇ ಗಮನಿಸಿ : ನಿಮ್ಮ ಜಿಲ್ಲೆಯಲ್ಲಿ ವಿದ್ಯುತ್ ಸಮಸ್ಯೆಗಳಿದ್ರೆ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ.!

20/12/2025 1:47 PM

ಫೋನ್ ಮತ್ತು ವ್ಯಾಲೆಟ್ ಒಟ್ಟಿಗೆ ಕಳೆದು ಕೊಂಡಿದ್ದೀರಾ? ನಿಮ್ಮ ಹಣವನ್ನು ವೇಗವಾಗಿ ರಕ್ಷಿಸಲು ಹಂತ ಹಂತದ ಮಾಹಿತಿ ಇಲ್ಲಿದೆ

20/12/2025 1:38 PM

BREAKING : ಕಾನೂನು ಸಚಿವ ಹೆಚ್ ಕೆ ಪಾಟೀಲ್ ಗೆ ಜೀವ ಬೆದರಿಕೆ ಹಾಕಿದ್ದ ಆರೋಪಿ ಅರೆಸ್ಟ್

20/12/2025 1:37 PM
State News
KARNATAKA

ಮೊಬೈಲ್ ಬಳಕೆದಾರರೇ ಗಮನಿಸಿ : ನಿಮ್ಮ ಹೆಸರಿನಲ್ಲಿ `ನಕಲಿ ಸಿಮ್ ಕಾರ್ಡ್’ ಇದ್ರೆ ಜಸ್ಟ್ ಒಂದೇ ನಿಮಿಷದಲ್ಲಿ ಬ್ಲಾಕ್ ಮಾಡಿ.!

By kannadanewsnow5720/12/2025 1:58 PM KARNATAKA 1 Min Read

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಆನ್ ಲೈನ್ ವಂಚನೆ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ಆದ್ದರಿಂದ, ನಿಮ್ಮ ದಾಖಲೆಗಳನ್ನು ದುರುಪಯೋಗಪಡಿಸಿಕೊಳ್ಳದಂತೆ ನೀವು ಜಾಗರೂಕರಾಗಿರಬೇಕು.…

ರಾಜ್ಯದ ಜನರೇ ಗಮನಿಸಿ : ನಿಮ್ಮ ಜಿಲ್ಲೆಯಲ್ಲಿ ವಿದ್ಯುತ್ ಸಮಸ್ಯೆಗಳಿದ್ರೆ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ.!

20/12/2025 1:47 PM

BREAKING : ಕಾನೂನು ಸಚಿವ ಹೆಚ್ ಕೆ ಪಾಟೀಲ್ ಗೆ ಜೀವ ಬೆದರಿಕೆ ಹಾಕಿದ್ದ ಆರೋಪಿ ಅರೆಸ್ಟ್

20/12/2025 1:37 PM

BREAKING : ಸಚಿವ H.K ಪಾಟೀಲ್ ಗೆ ಜೀವ ಬೆದರಿಕೆ ಕೇಸ್ : ಆರೋಪಿ ಅರೆಸ್ಟ್.!

20/12/2025 1:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.