ಜಮ್ಮು ಕಾಶ್ಮೀರ : ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಕಳೆದ ಎಪ್ರಿಲ್ 22ರಂದು ಉಗ್ರರು ಪ್ರವಾಸಿಗರ ಮೇಲೆ ಭೀಕರ ಗುಂಡಿನ ದಾಳಿ ನಡೆಸಿದ್ದರು. ಈ ಒಂದು ಘಟನೆ ಬಳಿಕ ಭಾರತವು ಪಾಕಿಸ್ತಾನ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದು ಸಿಂಧು ನದಿ ಜಲ ಒಪ್ಪಂದ ರದ್ದುಗೊಳಿಸಿದ್ದು, ಈ ಒಂದು ಕ್ರಮವನ್ನು ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಸ್ವಾಗತಿಸಿದ್ದಾರೆ.
ಸಿಂಧೂ ಜಲ ಒಪ್ಪಂದ ರದ್ದುಗೊಳಿಸಿದ ವಿಚಾರವಾಗಿ ಮಾತನಾಡಿದ ಅವರು, ಸಿಂಧೂ ಜಲ ಒಪ್ಪಂದ ರದ್ದುಗೊಳಿಸಿದ್ದನ್ನು ಸ್ವಾಗತಿಸುತ್ತೇನೆ. ಈಗಾಗಲೇ ಸಿಂಧೂ ಜಲ ಒಪ್ಪಂದದಿಂದ ಸಹ ಕಾಶ್ಮೀರಕ್ಕೆ ಸಾಕಷ್ಟು ನಷ್ಟವಾಗಿದೆ ಆದರೆ ಈ ಒಪ್ಪಂದವನ್ನು ಅಮಾನತುಗೊಳಿಸುವುದರಿಂದ ಜಮ್ಮು ಕಾಶ್ಮೀರಕ್ಕೆ ಪ್ರಯೋಜನವಾದರೆ ಅದು ಒಳ್ಳೆಯ ಬೆಳವಣಿಗೆ ಜಮ್ಮು ಕಾಶ್ಮೀರದ ರಾಂಬನ್ ನಲ್ಲಿ ಸಿಎಂ ಓಮರ್ ಅಬ್ದುಲ್ಲಾ ಹೇಳಿಕೆ ನೀಡಿದರು.