ಮಂಡ್ಯ : ಲೋಕಸಭಾ ಚುನಾವಣೆ ಕುರಿತಂತೆ ರಾಜ್ಯ ರಾಜಕಾರಣದಲ್ಲಿ ಚುನಾವಣಾ ರಂಗೇರಿದ್ದು ಇದೀಗ ಮಂಡ್ಯ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಏಪ್ರಿಲ್ ನಾಲ್ಕರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.
ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧಿಸಲಿದ್ದು ಹಾಸನ ಕೋಲಾರ್ ಹಾಗೂ ಮಂಡ್ಯ ಈ ಮೂರೂ ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧಿಸಲಿದೆ. ಇದೀಗ ಮಂಡ್ಯ ಜೆಡಿಎಸ್ ಅಭ್ಯರ್ಥಿಯಾಗಿ ಹೆಚ್ ಡಿ ಕುಮಾರಸ್ವಾಮಿ ಅವರು ಏಪ್ರಿಲ್ 4 ರಂದು ನಾಮಪತ್ರ ಸಲ್ಲಿಸಲಿದ್ದಾರೆ.
ಅದೇ ರೀತಿಯಾಗಿ ಉಳಿದ ಎರಡು ಕ್ಷೇತ್ರಗಳಾದ ಹಾಸನದಲ್ಲಿ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಸ್ಪರ್ಧಿಸಲಿದ್ದು ಅದೇ ರೀತಿಯಾಗಿ ಕೋಲಾರದಲ್ಲಿ ಮಲ್ಲೇಶ್ ಬಾಬು ಸ್ಪರ್ಧಿಸಲಿದ್ದಾರೆ. ಅವರು ಕೂಡ ಶೀಘ್ರದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಬಲ್ಲಮೂಲಗಳಿಂದ ತಿಳಿದುಬಂದಿದೆ.