ಬೆಂಗಳೂರು : ಇಂದು ಬಿಜೆಪಿಯ ಸಿಪಿ ಯೋಗೇಶ್ವರ್ ಅವರು ತಮ್ಮ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹುಬ್ಬಳ್ಳಿಗೆ ಆಗಮಿಸಿ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಇದರ ಬೆನ್ನಲ್ಲೇ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರ ನೇತೃತ್ವದಲ್ಲಿ ದಿಢೀರ್ ಸಭೆ ನಡೆಯುತ್ತಿದೆ.
ಹೌದು ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಸಿಪಿ ಯೋಗೇಶ್ವರ್ ಅವರು ತಮ್ಮ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೆ ಬೆಂಗಳೂರಿನ ಪದ್ಮನಾಭನಗರದ ದೇವೇಗೌಡರ ನಿವಾಸದಲ್ಲಿ ದಿಢೀರ್ ಸಭೆ ನಡೆಯುತ್ತಿದೆ. ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ಜೆಡಿಎಸ್ ಪ್ರಮುಖ ನಾಯಕರು ಸಭೆಯಲ್ಲಿ ಭಾಗಿಯಾಗಿದ್ದಾರೆ.
ಜೆಡಿಎಸ್ನಿಂದ ಸ್ಪರ್ಧೆಗೆ ನೀಡಿದ ಆಹ್ವಾನವನ್ನು ಸಿಪಿ ಯೋಗೇಶ್ವರ್ ತಿರಸ್ಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ನಿವಾಸದಲ್ಲಿ ದಿಢೀರ್ ಸಭೆ ನಡೆಯುತ್ತಿದೆ. ಹೆಚ್ಡಿ ಕುಮಾರಸ್ವಾಮಿ ಚನ್ನಪಟ್ಟಣ ಬೈ ಎಲೆಕ್ಷನ್ ಪ್ರತಿಷ್ಠೆಯಾಗಿ ಪರಿಗಣಿಸಿದ್ದಾರೆ. ಹಾಗಾಗಿ ಎಚ್ ಡಿ ದೇವೇಗೌಡ ನೇತೃತ್ವ ಸಭೆಯಲ್ಲಿ ಎನ್.ಡಿ.ಎ ಅಭ್ಯರ್ಥಿ ಅಂತಿಮ ಹೆಸರು ಘೋಷಿಸುವ ಸಾಧ್ಯತೆ ಇದೆ ಎನ್ನಲಾಗಿದೆ.