ನವದೆಹಲಿ : ರಾಜ್ಯದಲ್ಲಿ 2028 ಕ್ಕೆ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಜೆಡಿಎಸ್ ನಾಯಕ ಹೆಚ್.ಡಿ. ರೇವಣ್ಣ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 2028 ಕ್ಕೆ ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದಾರೆ.
ನಾವು ಕಾಂಗ್ರೆಸ್ ನ ಈ ಸಮಾವೇಶಕ್ಕೆ ಹೆದರುವುದಿಲ್ಲ. ಅಧಿಕಾರದಲ್ಲಿ ಇದ್ದಾಗ ಸಮಾವೇಶ ಮಾಡುತ್ತಿದ್ದಾರೆ. ರಾಜ್ಯದ ಜನರ ಹಣ ಲೂಟಿ ಮಾಡಿ ಸಮಾವೇಶ ಮಾಡುತ್ತಿದ್ದಾರೆ. ರಾಜ್ಯದ ಜನರಿಗೆ ಕಾಂಗ್ರೆಸ್ ಭ್ರಷ್ಟಾಚಾರದ ಬಗ್ಗೆ ಗೊತ್ತಾಗಿದೆ. ಹಾಸನ ಜಿಲ್ಲೆಗೆ ಕಾಂಗ್ರೆಸ್ ಪಕ್ಷದ ಕೊಡುಗೆ ಏನು? ಸಿದ್ದರಾಮಯ್ಯ ಅವರೇ ಈ ಹಿಂದೆ ಸಿಎಂ ಆಗಿದ್ದ ವೇಳೆ ಕ್ಷೇತ್ರಕ್ಕೆ ಏನೂ ಮಾಡಿಲ್ಲ. ಹಾಸನಕ್ಕೊಂದು ಫ್ಲೈಓವರ್ ಮಾಡಿಸಿಲ್ಲ. ಮಂಜೂರಾಗಿದ್ದ ರೈಲ್ವೆ ಯೋಜನೆಯನ್ನು ತಡೆದಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.