ಬೆಂಗಳೂರು : ಜಿ ರಾಮ್ ಜಿ ಯೋಜನೆಯಲಿ ಇರುವುದು ಗೋಡ್ಸೆ ರಾಮ ಮನ್ರೇಗಾ ಹೆಸರು ಬದಲಾಯಿಸಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. ಅದು ಶ್ರೀರಾಮನ ಹೆಸರು ಅಲ್ಲ ಅದು ಗೋಡ್ಸೆ ರಾಮ. ದಶರಥ ರಾಮನು ಅಲ್ಲ, ಸೀತಾರಾಮನು ಅಲ್ಲ, ಕೌಸಲ್ಯ ರಾಮನು ಅಲ್ಲ. ಇರೋದು ಗೋಡ್ಸೆ ರಾಮ ಮಹಾತ್ಮ ಗಾಂಧಿಯನ್ನು ಕೇಂದ್ರ ಮತ್ತೆ ಕೊಂದು ಹಾಕಿದೆ ಎಂದು ಕಿಡಿ ಕಾರಿದರು.
ಮನರೇಗಾ ಯೋಜನೆಯನ್ನು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಧಿಕಾರಾವಧಿಯಲ್ಲಿ ಜಾರಿಗೆ ತರಲಾಯಿತು. ಆದರೆ ಈಗ ಮಹಾತ್ಮ ಗಾಂಧಿಯವರ ಹೆಸರಿನ ಕಾಯ್ದೆ ಬದಲಾವಣೆ ಮಾಡಿ ವಿಬಿ ಜಿ ರಾಮ್ ಜಿ ಎಂದು ಹೆಸರಿಟ್ಟಿದ್ದಾರೆ. ಈ ಮೂಲಕ ಮಹಾತ್ಮ ಗಾಂಧಿಯವರನ್ನು ಎರಡನೇ ಬಾರಿ ಕೊಲೆ ಮಾಡುತ್ತಿದ್ದಾರೆ. ಈ ಯೋಜನೆಯಡಿ ಕೇಂದ್ರ ಸರ್ಕಾರ 60% ಅನುದಾನ, ರಾಜ್ಯಗಳು 40% ಅನುದಾನ ನೀಡಬೇಕು. ಇದನ್ನು ನಮ್ಮ ಪಕ್ಷ ಗಂಭೀರವಾಗಿ ಪರಿಗಣಿಸಿದ್ದು, ಕಾನೂನಿನ ಸಮರಕ್ಕೆ ಮುಂದಾಗಿದೆ. ವಿಶೇಷ ಅಧಿವೇಶನ ಕರೆದು ಈ ಬಗ್ಗೆ ಚರ್ಚೆ ಮಾಡಲಾಗುವುದು.
ಈ ಕಾಯ್ದೆಯಲ್ಲಿ ಇರುವುದು ದಶರಥ ಪುತ್ರ ರಾಮನೂ ಅಲ್ಲ, ಕೌಸಲ್ಯಾ ರಾಮನೂ ಅಲ್ಲ. ನಾಥೂರಾಮ. ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ರದ್ದು ಮಾಡುವವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲ. ಜೇವರ್ಗಿ ಮತ್ತು ಸೇಡಂ ನಲ್ಲಿ ಇಂದು 1,595 ಕೋಟಿ ರೂ ಗಳ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗಿದೆ. ಸೇಡಂ ಕ್ಷೇತ್ರದಲ್ಲಿ 579.68 ಕೋಟಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೀಡಿ, 108 .35 ಕೋಟಿ ರೂ.ಗಳ ಕಾಮಗಾರಿಗಳನ್ನು ಉದ್ಘಾಟಿಸಲಾಗಿದೆ.
ಮಲ್ಲಿಕಾರ್ಜುನ ಖರ್ಗೆ ಹಾಗೂ ಧರ್ಮಂ ಸಿಂಗ್ ಅವರು ಇಲ್ಲದೇ ಹೋಗಿದ್ದರೆ 371ಜೆ ಜಾರಿಯಾಗುತ್ತಿರಲಿಲ್ಲ. 371 ಜೆ ಕಾಯ್ದೆಯಿಂದಾಗಿ ಈ ಭಾಗದಲ್ಲಿ ಹತ್ತು ಸಾವಿರ ವೈದ್ಯರು, 30,000 ಇಂಜಿನಿಯರ್‌ಗಳು, 12,000 ಜನ ದಂತ ವೈದ್ಯರು ಹಾಗೂ ಇನ್ನಿತರೆ ಉನ್ನತ ಶಿಕ್ಷಣ ಪಡೆದಿದ್ದಾರೆ. ಕಲ್ಯಾಣ ಕರ್ನಾಟಕದಲ್ಲಿ 70% ಮೀಸಲಾತಿ ನೀಡಲಾಯಿತು. ಇವೆಲ್ಲವೂ ಸಾಧ್ಯವಾಗಿದ್ದು ಕಾಂಗ್ರೆಸ್ ಸರ್ಕಾರದಿಂದ. ಇದರಿಂದ 85,000 ಜನರಿಗೆ ಸರ್ಕಾರಿ ನೌಕರಿ ದೊರಕಲು ಸಾಧ್ಯವಾಯಿತು. ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಸೇಡಂ ಪುರಸಭೆಯನ್ನು ನಗರಸಭೆಯನ್ನಾಗಿ ಕೂಡ ಮಾಡಲಾಗಿದೆ.
ಪ್ರಧಾನಮಂತ್ರಿ ಸೇರಿದಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದರೆ ರಾಜ್ಯ ದಿವಾಳಿಯಾಗುತ್ತದೆ ಎಂದು ಟೀಕಿಸಿದ್ದರು. ಅಧಿಕಾರಕ್ಕೆ ಬಂದು ಎರಡೂವರೆ ವರ್ಷಗಳಲ್ಲಿ ರೂ.1,12,000 ಕೋಟಿಗಳನ್ನು ಗ್ಯಾರಂಟಿ ಯೋಜನೆಗಳಿಗಾಗಿ ವೆಚ್ಚ ಮಾಡಲಾಗಿದೆ. ಖಜಾನೆಯಲ್ಲಿ ಹಣವಿಲ್ಲದಿದ್ದರೆ ಇಂದು 680 ಕೋಟಿ ರೂ.ಗಳ ಯೋಜನೆಗೆ ಚಾಲನೆ ನೀಡಲು ಸಾಧ್ಯವಾಗುತ್ತಿರಲಿಲ್ಲ.
ಸೇಡಂ ನಲ್ಲಿ 73 ಕೋಟಿ ರೂ. ಗಳ ವೆಚ್ಚದಲ್ಲಿ ಜಿಟಿಟಿಸಿ ಕೇಂದ್ರ ಸ್ಥಾಪನೆಯಾಗುತ್ತಿದೆ. ಇಲ್ಲಿ ತರಬೇತಿ ಪಡೆದವರಿಗೆ ನೂರಕ್ಕೆ ನೂರರಷ್ಟು ಕೆಲಸ ದೊರಕುತ್ತದೆ. ಬಿಜೆಪಿ ಅಧಿಕಾರದ ಅವಧಿಯಲ್ಲಿ 4 ಜಿಟಿಟಿಸಿ ಸ್ಥಾಪಿಸಿದ್ದರೆ, ಎರಡೂವರೆ ವರ್ಷಗಳಲ್ಲಿ ನಮ್ಮ ಸರ್ಕಾರದ ಅವಧಿಯಲ್ಲಿ 10 ಜಿಟಿಟಿಸಿ ಪ್ರಾರಂಭ ಮಾಡಿದ್ದೇವೆ.
ಸೇಡಂ ನಲ್ಲಿ ಕಾಚೂರ ಏತ ನೀರಾವರಿಗೆ 85.50 ಲಕ್ಷ, ಬೀರನಹಳ್ಳಿ 90 ಕೋಟಿ, ಯಡಹಳ್ಳಿ ಏತ ನೀರಾವರಿ ಯೋಜನೆಗೆ 67.30 ಕೋಟಿ, ತರನ ಹಳ್ಳಿ ಯೋಜನೆಗೆ ರೂ.82.90 ಕೋಟಿ ಒದಗಿಸಲಾಗಿದೆ. ಇದರಿಂದ 8,000 ಹೆಕ್ಟೇರ್ ಗೆ ನೀರಾವರಿ ಸೌಲಭ್ಯ ದೊರಕಲಿದೆ. ಇದರಿಂದ ತೊಗರಿ, ಕಬ್ಬು ಮುಂತಾದ ವಾಣಿಜ್ಯ ಬೆಳೆಗಳನ್ನು ಬೆಳೆಯಬಹುದಾಗಿದೆ. ಅಂತರ್ಜಲ ಮಟ್ಟವನ್ನು ಇದರಿಂದ ಹೆಚ್ಚು ಮಾಡಬಹುದಾಗಿದೆ. ಕುಡಿಯುವ ನೀರಿಗೆ ಸಹ ಉಪಯೋಗವಾಗಲಿದೆ.
ಎಲ್ಲಾ ಜಿಲ್ಲೆಗಳೂ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲಾಗುವುದು. ದಕ್ಷಿಣ ಕನ್ನಡ, ರಾಮನಗರ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜುಗಳನ್ನು ಈ ವರ್ಷ ಪ್ರಾರಂಭಿಸಲಾಗುವುದು. ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ದುಬಾರಿಯಾಗಿರುವುದರಿಂದ ಸರ್ಕಾರ ಬಡವರಿಗೆ ಅನುಕೂಲ ಕಲ್ಪಿಸಲು ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡುತ್ತಿದೆ. ನಮ್ಮ ಸರ್ಕಾರ ಎಲ್ಲರನ್ನೂ ಒಳಗೊಂಡಿರುವ ಸರ್ಕಾರ. ಎಲ್ಲರ ಅಭಿವೃದ್ಧಿಯೇ ನಾಡಿನ ಅಭಿವೃದ್ಧಿ ಎಂದು ನಂಬಿ, ಅದರಂತೆ ನಡೆಯುತ್ತಿದ್ದೇವೆ.
ಮನರೇಗಾ ಯೋಜನೆಯನ್ನು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಧಿಕಾರಾವಧಿಯಲ್ಲಿ ಜಾರಿಗೆ ತರಲಾಯಿತು. ಆದರೆ ಈಗ ಮಹಾತ್ಮ ಗಾಂಧಿಯವರ ಹೆಸರಿನ ಕಾಯ್ದೆ ಬದಲಾವಣೆ ಮಾಡಿ ವಿಬಿ ಜಿ ರಾಮ್ ಜಿ ಎಂದು ಹೆಸರಿಟ್ಟಿದ್ದಾರೆ. ಈ ಮೂಲಕ ಮಹಾತ್ಮ ಗಾಂಧಿಯವರನ್ನು ಎರಡನೇ ಬಾರಿ ಕೊಲೆ ಮಾಡುತ್ತಿದ್ದಾರೆ. ಈ ಯೋಜನೆಯಡಿ ಕೇಂದ್ರ ಸರ್ಕಾರ 60% ಅನುದಾನ, ರಾಜ್ಯಗಳು 40%… pic.twitter.com/qx8K3fJoFX
— Siddaramaiah (@siddaramaiah) January 12, 2026








