ಬೆಂಗಳೂರು : ದಿನಾಂಕ:12/06/2025 ರಂದು “ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ”ದ ಆಯೋಜನೆಯ ಕುರಿತು ನಿರ್ದೇಶನ ಹಾಗೂ ಅನುದಾನ ಬಿಡುಗಡೆ ಮಾಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಅಂತರಾಷ್ಟ್ರೀಯ ಕಾರ್ಮಿಕ ಸಂಸ್ಥೆ (ILO) ಘೋಷಿಸಿರುವಂತೆ, ವಿಶ್ವ ಸಂಸ್ಥೆಯ ಎಲ್ಲಾ ಮಿತ್ರ ರಾಷ್ಟ್ರಗಳು ಪ್ರತಿ ವರ್ಷ ಜೂನ್-12 ರಂದು “ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನವನ್ನಾಗಿ ಆಯೋಜಿಸಲಾಗುತ್ತಿದೆ. ಕರ್ನಾಟಕ ಸರ್ಕಾರ ಪ್ರತಿ ವರ್ಷ ಜೂನ್-12 ರಂದು ಜಿಲ್ಲೆಯಾದ್ಯಂತ “ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ”ವನ್ನು ಆಯೋಜಿಸಲಾಗುತ್ತಿತ್ತು. ಜಿಲ್ಲಾ ಮಟ್ಟದಲ್ಲಿ ಆಯಾ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ.
ಉಲ್ಲೇಖ ಪತ್ರದಲ್ಲಿ ಜಿಲ್ಲಾಧಿಕಾರಿಗಳಿಗೆ ದಿನಾಂಕ:12.06.2025 ರಂದು “ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನವನ್ನು ಆಯೋಜಿಸುವ ಕುರಿತು ಅನುದಾನವನ್ನು ಬಿಡುಗಡೆ ಮಾಡಿ ನಿರ್ದೇಶನವನ್ನು ನೀಡಲಾಗಿರುತ್ತದೆ. ಈ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಉಲ್ಲೇಖ ಪತ್ರದಲ್ಲಿನ ನಿರ್ದೇಶನಗಳನ್ನು ಪಾಲಿಸಿ “ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನವನ್ನು ಯಶಸ್ವಿಯಾಗಿ ಆಯೋಜಿಸಲು ಕ್ರಮಗಳನ್ನು ಕೈಗೊಳ್ಳಲು ಈ ಮೂಲಕ ಸೂಚಿಸಿದೆ(ಉಲ್ಲೇಖ ಪತ್ರವನ್ನು ಈ ಪತ್ರದೊಂದಿಗೆ ಲಗತ್ತಿಸಿದೆ) ಹಾಗೂ ದಿನಾಂಕ:12.06.2025 ರಂದು “ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ’ವನ್ನು ಯಶಸ್ವಿಯಾಗಿ ಆಯೋಜಿಸಿರುವ ಕುರಿತು ಸಂಪೂರ್ಣ ವರದಿಯನ್ನು ಛಾಯಾಚಿತ್ರಗಳೊಂದಿಗೆ ಈ ಕಛೇರಿಗೆ ಸಲ್ಲಿಸಲು ಈ ಮೂಲಕ ಸೂಚಿಸಿದೆ.
ವಿಶ್ವ ಬಾಲಕಾರ್ಮಿಕ ವಿರೋಧಿ ದಿನ-2025
ಪ್ರಮಾಣ ವಚನ
ನಾನು ಸತ್ಯವಾಗಿ, ಪ್ರಾಮಾಣಿಕವಾಗಿ ಹಾಗೂ ಆತ್ಮಸಾಕ್ಷಿಯಾಗಿ ಪ್ರಮಾಣ ಮಾಡುವುದೇನೆಂದರೆ, ನಾನು ವಾಸಿಸುವ ಸುತ್ತ ಮುತ್ತಲಿನ ಪ್ರದೇಶ ಹಾಗೂ ನಾನು ಕೆಲಸ ಮಾಡುವ ಸ್ಥಳದಲ್ಲಿ ಯಾವುದೇ ಬಾಲಕಾರ್ಮಿಕರು ಕಂಡುಬಂದಲ್ಲಿ ನೇಮಿಸಿಕೊಂಡ ಮಾಲೀಕರು ಹಾಗೂ ಪೋಷಕರಿಗೆ ತಿಳುವಳಿಕೆ ಹೇಳಿ ಮಗುವನ್ನು ಶಾಲೆಗೆ ಸೇರಿಸುತ್ತೇನೆ. ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರನ್ನು ತೊಡಗಿಸಿಕೊಂಡು ತಯಾರಿಸಲ್ಪಟ್ಟ ಯಾವುದೇ ವಸ್ತುವನ್ನು ಉಪಯೋಗಿಸುವುದಿಲ್ಲ ಮತ್ತು ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ಸೇವೆಯನ್ನು ಪಡೆಯುವುದಿಲ್ಲವೆಂದು “ವಿಶ್ವ ಬಾಲಕಾರ್ಮಿಕ ವಿರೋಧಿ ದಿನ’ವಾದ ಇಂದು ಪ್ರಮಾಣ ಮಾಡುತ್ತೇನೆ.