ಬೆಂಗಳೂರು : ಆರೆಸ್ಸೆಸ್ ಬ್ಯಾನ್ ವಿಚಾರದಲ್ಲಿ ಹೇಳಿಕೆ ನೀಡಿ ಪ್ರಿಯಾಂಕ್ ಖರ್ಗೆ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧದ ಮಾತಿನ ಸಮರ ಇನ್ನಷ್ಟು ತೀವ್ರವಾಗಿದೆ. ಇದೀಗ ಪ್ರತಾಪ್ ಸಿಂಹ ಇದೆ ವಿಚಾರವಾಗಿ ಪ್ರಿಯಾಂಕ್ ಖರ್ಗೆಯ ಹೆಸರನ್ನೇ ಹಿಡಿದು ಜನ್ಮ ಜಾಲಾಡಿದ್ದರು.ಈಗ ಪ್ರತಾಪ್ ಸಿಂಹ ಮಾತಿಗೆ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡುವ ತಿರುಗೇಟು ಕೊಟ್ಟಿದ್ದಾರೆ. ನರಿಗಳು ಸಿಂಹ ಅಂತಾ ಹೆಸರಿಟ್ಟುಕೊಂಡರೆ ಸಿಂಹ ಆಗಲು ಸಾಧ್ಯವಿಲ್ಲ ಎಂದು ಬರೆದುಕೊಂಡಿದ್ದಾರೆ.
ಹೌದು ಟ್ವೀಟ್ ನಲ್ಲಿ ಔಟ್ ಡೇಟೆಡ್ ವಸ್ತುಗಳಿಗೆ ಮಾರುಕಟ್ಟೆಯಲ್ಲಿ ಬೆಲೆ ಇರುವುದಿಲ್ಲ. ಸ್ವತಃ ಬಿಜೆಪಿಯಿಂದಲೇ ತಿರಸ್ಕೃತಗೊಂಡು ಬೆಲೆ ಕಳೆದುಕೊಂಡಿರುವ ಪ್ರತಾಪ್ ಸಿಂಹ ಎಂಬ ಔಟ್ ಡೇಟೆಡ್ ವ್ಯಕ್ತಿ ನನ್ನ ಬಗ್ಗೆ ಮಾತನಾಡುವ ಮೂಲಕ ಮಾರ್ಕೆಟ್ ಕುದುರಿಸಿಕೊಳ್ಳುವ ತವಕದಲ್ಲಿದ್ದಾರೆ. ವಿಜಯೇಂದ್ರ ಹಠವೋ ಬಣದಲ್ಲಿರುವ ಪ್ರತಾಪ್ ಸಿಂಹ ಮೊದಲು ತಮ್ಮ ಅಭಿಯಾನದಲ್ಲಿ ಯಶಸ್ವಿಯಾಗಿ, ತಮ್ಮ ಸಾಮರ್ಥ್ಯ ನಿರೂಪಿಸಿದ ನಂತರ ನನ್ನ ಬಗ್ಗೆ ಗಮನ ಕೊಡಲಿ.
ಪ್ರತಾಪ್ ಸಿಂಹ ಅವರೇ, ಬಿಜೆಪಿ ಪಕ್ಷ ನಿಮಗೆ ಟಿಕೆಟ್ ನೀಡದೆ ಮೂಲೆಗೆ ತಳ್ಳಿದ್ದೇಕೆ? ಸಾಮರ್ಥ್ಯವಿಲ್ಲದ್ದಕ್ಕಾ? ಟಿಕೆಟ್ ಅಷ್ಟೇ ಅಲ್ಲ, ಪಕ್ಷದಲ್ಲೂ ಯಾವುದೇ ಪ್ರಮುಖ ಹುದ್ದೆ ನೀಡದೆ ನಿರ್ಲಕ್ಷಿಸಿರುವುದೇಕೆ? ಅರ್ಹತೆ ಇಲ್ಲದ್ದಕ್ಕಾ? ನರಿಗಳು ಸಿಂಹ ಅಂತ ಹೆಸರಿಟ್ಟುಕೊಂಡ ಮಾತ್ರಕ್ಕೆ ಸಿಂಹ ಆಗಲು ಸಾಧ್ಯವಿಲ್ಲ. ನನ್ನ ಬಗ್ಗೆ ಮಾತನಾಡಲು ಗಂಭೀರ ವಿಷಯಗಳಿಲ್ಲದೆ ನನ್ನ ಹೆಸರಿನ ಬಗ್ಗೆ ತಲೆಕೆಡಿಸಿಕೊಳ್ಳುವ ಬದಲು ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ತಲೆಕೆಡಿಸಿಕೊಂಡರೆ ಒಳ್ಳೆಯದು ಎಂದು ವಾಗ್ದಾಳಿ ನಡೆಸಿದ್ದಾರೆ.
ಔಟ್ ಡೇಟೆಡ್ ವಸ್ತುಗಳಿಗೆ ಮಾರುಕಟ್ಟೆಯಲ್ಲಿ ಬೆಲೆ ಇರುವುದಿಲ್ಲ.
ಸ್ವತಃ ಬಿಜೆಪಿಯಿಂದಲೇ ತಿರಸ್ಕೃತಗೊಂಡು ಬೆಲೆ ಕಳೆದುಕೊಂಡಿರುವ ಪ್ರತಾಪ್ ಸಿಂಹ ಎಂಬ ಔಟ್ ಡೇಟೆಡ್ ವ್ಯಕ್ತಿ ನನ್ನ ಬಗ್ಗೆ ಮಾತನಾಡುವ ಮೂಲಕ ಮಾರ್ಕೆಟ್ ಕುದುರಿಸಿಕೊಳ್ಳುವ ತವಕದಲ್ಲಿದ್ದಾರೆ.
ವಿಜಯೇಂದ್ರ ಹಠವೋ ಬಣದಲ್ಲಿರುವ ಪ್ರತಾಪ್ ಸಿಂಹ ಮೊದಲು ತಮ್ಮ ಅಭಿಯಾನದಲ್ಲಿ…
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) July 7, 2025