ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ಕನಕಪುರದ ನವೋದಯ ಆಸ್ಪತ್ರೆಯ ವೈದ್ಯ ಚೇತನ್ ಆತ್ಮಹತ್ಯೆಗೆ ಶರಣಾಗಿದ್ದರು. ಇದೀಗ 2 ದಿನಗಳ ಬಳಿಕ ಮಹದೇಶ್ವರ ಬಡಾವಣೆಯ ಮನೆಯಲ್ಲಿ ಅದೇ ಆಸ್ಪತ್ರೆಯ ನರ್ಸ್ ಒಬ್ಬರು ನೇಣಿಗೆ ಶರಣಾಗಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರದ ಮಹದೇಶ್ವರ ಬಡಾವಣೆಯಲ್ಲಿ ಈ ಒಂದು ಘಟನೆ ನಡೆದಿದೆ.
ನವೋದಯ ಆಸ್ಪತ್ರೆಯ ನರ್ಸ್ ಸರಸ್ವತಿ (45) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಎರಡು ದಿನಗಳ ಹಿಂದೆ ಡಾ. ಚೇತನ್ ಟೆಂಕರ್ ಆತ್ಮಹತ್ಯೆಗೆ ಶರಣಾಗಿದ್ದರು. ಕನಕಪುರದ ನವೋದಯ ಆಸ್ಪತ್ರೆಯ ವೈದ್ಯ ಡಾಕ್ಟರ್ ಚೇತನ್ ಟೆಂಕರ್ ಆತ್ಮಹತ್ಯೆಗೆ ಶರಣಾಗಿದ್ದರು. ವೈದ್ಯ ಚೇತನ್ ಆತ್ಮಹತ್ಯೆ ನರ್ಸ್ ಕೂಡ ನೇಣಿಗೆ ಶರಣಾಗಿದ್ದಾರೆ. ಘಟನೆ ಕುರಿತಂತೆ ಕನಕಪುರದ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








