ಕಲಬುರ್ಗಿ : ಕಲಬುರ್ಗಿಯ ಸೆಂಟ್ರಲ್ ಜೈಲಿನ ಅಧೀಕ್ಷಕಿ ಅನಿತಾ ಎನ್ನುವವರ ಕಾರನ್ನು ಸ್ಫೋಟಿಸುವುದಾಗಿ ದುಷ್ಕರ್ಮಿಯೊಬ್ಬ ಆಡಿಯೋ ಸಂದೇಶ ಕಳಿಸಿದ್ದಾನೆ. ಈ ನೆಲೆಯಲ್ಲಿ ಪೊಲೀಸರು ಕೇಂದ್ರ ಕಾರಾಗೃಹದ ಸುತ್ತಲೂ ಅಲರ್ಟ್ ಆಗಿದ್ದಾರೆ.
ಅನಾಮದೇಯ ವ್ಯಕ್ತಿಯಿಂದ ಕಲಬುರಗಿ ನಗರದ ಪೊಲೀಸ್ ಇನ್ಸೆಪೆಕ್ಟರ್ ಮೊಬೈಲ್‍ಗೆ ಬೆದರಿಕೆ ಸಂದೇಶ ಬಂದಿದೆ. ಈ ಮಾಹಿತಿಯನ್ನು ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಇದರಿಂದ ಅಲರ್ಟ್ ಆಗಿರುವ ಅಧಿಕಾರಿಗಳು ಕಾರನ್ನು ಸಿಸಿಟಿವಿ ಇರುವೆಡೆ ಮಾತ್ರ ಪಾರ್ಕ್ ಮಾಡುವಂತೆ ಕಾರು ಚಾಲಕನಿಗೆ ಸೂಚಿಸಿದ್ದಾರೆ.
ಜೈಲಿನಲ್ಲಿ ಬೀಡಿ, ಗುಟ್ಕಾ ಸಿಗರೇಟ್ ಬಂದ್ ಮಾಡಿದ್ದಕ್ಕೆ ಅನೀತಾ ವಿರುದ್ಧ ಕೈದಿಗಳು ಮಂಗಳವಾರ ಪ್ರತಿಭಟನೆ ಮಾಡಿದ್ದರು. ಕಟ್ಟು ನಿಟ್ಟಿನ ರೂಲ್ಸ್ ವಿರುದ್ಧ ಕೇರಳಿದ ಕೈದಿಗಳಿಂದ ಬಂದ ಬೆದರಿಕೆ ಆಡಿಯೋನಾ? ಹತ್ಯೆಗೆ ಸಂಚು ನಡೆದಿದೆಯೇ ಎಂಬ ಅನುಮಾನ ವ್ಯಕ್ತವಾಗಿದೆ. ಕಳೆದ ಒಂದೂವರೆ ತಿಂಗಳಿನ ಹಿಂದೆಯಷ್ಟೇ ಅನಿತಾ ಅವರು ಕಲಬುರಗಿ ಸೆಂಟ್ರಲ್ ಜೈಲಿಗೆ ವರ್ಗಾವಣೆ ಆಗಿದ್ದರು. ಜೈಲಿನಲ್ಲಿ ಕಠಿಣ ನಿಯಮ ಜಾರಿಗೊಳಿಸಲು ಮುಂದಾಗಿದ್ದಕ್ಕೆ ಕೈದಿಗಳೇ ಬೆದರಿಕೆ ಸಂದೇಶ ಕಳುಹಿಸಿರುವ ಶಂಕೆ ವ್ಯಕ್ತವಾಗಿದೆ.